Advertisement

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ : ತಮಿಳುನಾಡು ಸರ್ಕಾರ

08:28 PM May 26, 2021 | Team Udayavani |

ಚೆನ್ನೈ : ಕೋವಿಡ್ ಸೋಂಕಿನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಇನ್ಮುಂದೆ 10 ಲಕ್ಷ ರೂಪಾಯಿ ಪರಿಹಾರ ಧನ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಣೆ ಮಾಡಿದೆ.

Advertisement

ಕೋವಿಡ್ ನಿಂತ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಇಷ್ಟು ದಿನ ತಮಿಳುನಾಡಿನಲ್ಲಿ 5 ಲಕ್ಷ ರೂ.ಪರಿಹಾರ ಧನ ನೀಡಲಾಗುತ್ತಿತ್ತು. ಈಗ ಅದನ್ನು 10 ಲಕ್ಷಕ್ಕೆ ಏರಿಸಿ ಘೋಷಣೆ ಮಾಡಿದೆ.

ಇದನ್ನೂ ಓದಿ : ನಾಳೆ(ಮೇ.27)ಸಂಜೆ 5ಕ್ಕೆ : ‘ವಿದೇಶದಲ್ಲಿ ದುಡಿಮೆ, ಮನಸು ತಾಯ್ನಾಡಿನಲ್ಲಿ..!’

ಇನ್ನು, ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ ಮುಂಚೂಣಿ ಪತ್ರಕರ್ತರಿಗೆ 3000 ರೂ. ಬದಲಾಗಿ 5000 ರೂ. ಪ್ರೋತ್ಸಾಹಧನ ನೀಡುವುದಾಗಿಯೂ ಎಂ.ಕೆ.ಸ್ಟಾಲಿನ್​ ನೇತೃತ್ವದ ಸರ್ಕಾರ ತಿಳಿಸಿದೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ಕೂಡ ಜೀವ ಪಣಕ್ಕಿಟ್ಟು ಪತ್ರಕರ್ತರು ಕೆಲಸ ಮಾಡಿದ್ದಾರೆ. ಅವರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಹೆಚ್ಚಿಸಬೇಕು ಎಂದು  ಪತ್ರಕರ್ತರ ಸಂಗಟನೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಟ್ಯಾಲಿನ್  ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತನ್ನ ಪ್ರಕಟಣೆಯಲ್ಲಿ ಸರ್ಕಾರ ಮಾಹಿತಿ ನೀಡಿದೆ.

Advertisement

ಇನ್ನು, ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ.  ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವಾಗಿ ಕೆಲಸ ಮಾಡಿದ್ದಾರೆ. ಸರ್ಕಾರದ ಯೋಜನೆಗಳು, ಮಾಹಿತಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದ್ದಾರೆ. ಇನ್ನು, ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಕೊವಿಡ್ ಸ್ಥಿತಿಗತಿಗಳನ್ನು ಸರಿಯಾಗಿ ವರದಿ ಮಾಡುವ ಮೂಲಕ ಸರ್ಕಾರಕ್ಕೂ ಸಹಾಯ ಮಾಡಿದ್ದಾರೆ. ಸಾರ್ವಜನಿಕರಲ್ಲಿ ಅರಿವು ಕೂಡ ಮೂಡಿಸುವ ಕೆಲಸ ಮಾಡಿದ್ದಾರೆ. ಅಂಥ ಪತ್ರಕರ್ತರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪರಿಹಾರ ಮೊತ್ತ ಹೆಚ್ಚಿಸಲಾಗಿದೆ ಎಂದು ಸರ್ಕಾರಿ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ಮುಖ್ಯಮಂತ್ರಿ ಸ್ಟ್ಯಾಲಿನ್​ ಅವರ ಈ ಹೊಸ ನಿರ್ಧಾರವನ್ನು ಸ್ವಾಗತಿಸಿದ ಚೆನ್ನೈ ಪ್ರೆಸ್​ ಕ್ಲಬ್ ​ನ ಸದಸ್ಯರು, ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ ನೀಡುವ ಪರಿಹಾರ ಧನದ ಮೊತ್ತವನ್ನು 10 ಲಕ್ಷದಿಂದ 25 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಬೇಕು ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಉಡುಪಿ : ಅಪಘಾತದಿಂದಾಗಿ ಗಂಭೀರ ಗಾಯಗೊಂಡಿದ್ದ ಸಾರಿಗೆ ಉದ್ಯಮಿ ಸಾವು

Advertisement

Udayavani is now on Telegram. Click here to join our channel and stay updated with the latest news.

Next