Advertisement

Police ಕಾನ್‌ಸ್ಟೆಬಲ್‌: ಡಿ.10ರಂದು ಲಿಖಿತ ಪರೀಕ್ಷೆ

08:31 PM Nov 27, 2023 | Team Udayavani |

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್‌ ಕಾನ್‌ಸ್ಟೆಬಲ್‌(ಸಿವಿಲ್‌)(ಪುರುಷ ಮತ್ತು ಮಹಿಳಾ)(ತೃತೀಯ ಲಿಂಗ, ಪುರುಷ ಮತ್ತು ಮಹಿಳಾ) ಹಾಗೂ ಸೇವಾ ನಿರತ ಮತ್ತು ಬ್ಯಾಕ್‌ಲಾಗ್‌ ಸಹಿತ 454 ಹುದ್ದೆಗಳಿಗೆ ನೇಮಕಾತಿ ಸಂಬಂಧ ಡಿ.10ರಂದು ಬೆಳಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿದೆ.

Advertisement

ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್‌ ಜಿಲ್ಲೆ , ಕಲಬುರಗಿ ನಗರ, ಕಲಬುರಗಿ ಜಿಲ್ಲೆ , ಯಾದಗಿರಿ ಜಿಲ್ಲೆ , ರಾಯಚೂರು ಜಿಲ್ಲೆ , ಕೊಪ್ಪಳ ಜಿಲ್ಲೆ , ಬಳ್ಳಾರಿ ಜಿಲ್ಲೆ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಈ ಲಿಖಿತ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಮುಂಬರುವ ದಿನಗಳಲ್ಲಿ ಕರೆಪತ್ರದ ಬಗ್ಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗುವುದು. ಕರೆಪತ್ರ ಲಿಂಕ್‌ ಕೂಡ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರ ಡೌನ್‌ನೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್‌ ನೇಮಕಾತಿ ವಿಭಾಗದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next