Advertisement

ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ, ಮೂತ್ರ ವಿಸರ್ಜನೆ ಮಾಡಿದ್ರೆ ಒಂದು ಸಾವಿರ ರೂ. ದಂಡ: NDMC

09:12 AM Apr 19, 2020 | Nagendra Trasi |

ನವದೆಹಲಿ: ಕೋವಿಡ್ 19 ಮಾರಣಾಂತಿಕ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನ್ಯೂ ದಿಲ್ಲಿ ಮುನ್ಸಿಪಲ್ ಕೌನ್ಸಿಲ್(ಎನ್ ಡಿಎಂಸಿ), ಯಾರೇ ಆಗಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದಾಗಲಿ, ಮೂತ್ರ ಮಾಡಿದ್ದು ಕಂಡು ಬಂದಲ್ಲಿ ಒಂದು ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಎಚ್ಚರಿಕೆ ಸಂದೇಶ ನೀಡಿದೆ.

Advertisement

ದೆಹಲಿಯಲ್ಲಿ ಯಾವುದೇ ಕಾರಣಕ್ಕೂ ಮದ್ಯ, ಗುಟ್ಕಾ ಹಾಗೂ ತಂಬಾಕು ಮಾರಾಟ ಮಾಡುವುದನ್ನು ಕಠಿಣವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ಶಿಕ್ಷಾರ್ಹ ಅಪರಾಧ ಹಾಗೂ ದಂಡ ವಿಧಿಸಲಾಗುತ್ತದೆ. ಎನ್ ಎಂಡಿಸಿಯ ಯಾವುದೇ ಆದೇಶವನ್ನು ಉಲ್ಲಂಘಿಸಿದಲ್ಲಿ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next