Advertisement
ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಕುರಿತು ಮಾಹಿತಿ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಪ್ರತಿಭಾಶೋಧದ ಮೂಲಕ ಸಮ್ಮೇಳನ ಅಧ್ಯಕ್ಷರ ಆಯ್ಕೆ ನಡೆದಿದೆ ಎಂದರು.
Related Articles
Advertisement
ಪ್ರತಿಭೆಗೆ ಪ್ರೋತ್ಸಾಹ: ಮಕ್ಕಳ ಸೂಕ್ತ ಪ್ರತಿಭೆಗೆ ನೀರೆರೆದು ಪ್ರೋತ್ಸಾಹಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗಾಗಿ, ಮಕ್ಕಳಿಂದಲೇ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಹೇಳಿದರು. ಸಮ್ಮೇಳದನದ ಸ್ವಾಗತ ಸಮಿತಿ ಗೌರವ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು,
ಅಧ್ಯಕ್ಷರಾಗಿ ಶಾಸಕ ಎಚ್.ಎಸ್.ಪ್ರಕಾಶ್, ಪ್ರಧಾನ ಕಾರ್ಯದರ್ಶಿಯಾಗಿ ಹಾಸನ ಉಪ ವಿಭಾಗಾಧಿಕಾರಿ ಎಚ್.ಎಲ್.ನಾಗರಾಜು ಹಾಗೂ ವಿವಿಧ ಸಮಿತಿಗಳ ಪ್ರತಿನಿಧಿಗಳು ಕಾರ್ಯನಿರ್ವಹಿಸುವರು ಎಂದು ಸ್ವಾಮೀಜಿ ತಿಳಿಸಿದರು. ಉಪ ವಿಭಾಗಾಧಿಕಾರಿ ನಾಗರಾಜು, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಎನ್.ಅಶೋಕ್, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗುರೂಜಿ ಮತ್ತಿತರರು ಉಪಸ್ಥಿತರಿದ್ದರು.
ಭಾರ್ಗವಿ ಸಮ್ಮೇಳನಾಧ್ಯಕ್ಷೆಹಾಸನ: ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಫೆ.9 ಮತ್ತು 10 ರಂದು ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರ್ಗವಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಉಜಿರೆಯವರು. ಉಜಿರೆಯ ಎಸ್‌ಡಿಎಂ ಶಾಲೆಯಲ್ಲಿ 10ನೇ ತರಗತಿ ಓದು ತ್ತಿರುವ ಭಾರ್ಗವಿ ಅವರು ಪದ್ಮನಾಭ ಮತ್ತು ಭಾನುಮತಿ ಅವರ ಪುತ್ರಿ. ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಹಾಸನ ಉಪ ವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ನೇತೃತ್ವಲ್ಲಿ ನೂರಾರು ಮಕ್ಕಳ ಪ್ರತಿಭೆಯನ್ನು ಪರಿಶೋಧಿಸಿ ಅಂತಿಮವಾಗಿ ಭಾರ್ಗವಿ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರ ಜೊತೆಗೆ ಎಚ್.ಎಸ್.ವಿವೇಕ್, ಗೌರಮ್ಮ, ಅನನ್ಯ ಹಾಗೂ ಸುಬ್ರಹ್ಮಣ್ಯನಾವಡ ಸಮ್ಮೇಳನದ ಸಹ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.