Advertisement

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

12:11 AM Jul 06, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ಧಾಳಿ ನಡೆಸಿದ್ದಾರೆ.

Advertisement

ಮುಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್‌ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರ ರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಿಡಿ ಫ್ಯಾಕ್ಟರಿ ಅನಂತರ ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next