ಕಲಬುರಗಿ: 371 ಜೆ ಕಲಂ ಪರಿಣಾಮಕಾರಿ ಜಾರಿ ಮಾಡುವವ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕುರಿತು ಸಭೆ ಮಾಡಿ ತೀರ್ಮಾನ ಕೈಗೊಳ್ಳುವುದು ಕೈಗೊಳ್ಳಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾಮಗಾರಿಗಳನ್ನು ತ್ವರಿತವಾಗಿ ಮಾಡಲು ಪ್ರತ್ಯೇಕ ಇಂಜಿನಿಯರಿಂಗ್ ವಿಭಾಗವನ್ನು ರಚನೆ ಮಾಡಲು, ಈಗಾಗಲೇ ಕಳಿಸಿರುವ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಅಲ್ಲದೆ ಕಲ್ಯಾಣ ಭಾಗದಲ್ಲಿ ಶಿಕ್ಷಣ ಕ್ಷೇತ್ರವನ್ನು ಬಲಗೊಳಿಸುವ ನಿಟ್ಟಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ 2618 ಶಿಕ್ಷಕರನ್ನು ಆದ್ಯತೆಯ ಮೇರೆಗೆ ನೇಮಕಕ್ಕೆ ಸೂಚಿಸಲಾಗಿದೆ. ಹಣಕಾಸು ಇಲಾಖೆಯ ಅನುಮೋದನೆಯೂ ಕಳಿಸಲಾಗಿದೆ ಎಂದರು.
ರಾಜ್ಯದಲ್ಲಿ ಹಿಂದಿನ ಸರಕಾರ ಘೋಷಣೆ ಮಾಡಿರುವ 8 ವಿಶ್ವ ವಿದ್ಯಾಲಯಗಳ ಘೋಷಣೆಯೇ ಕ್ರಮ ಬದ್ಧವಾಗಿಲ್ಲ. ಹಾಗಿದ್ದಾಗ ಅವುಗಳನ್ನು ಆರಂಭಿಸಲು ಹೇಗೆ ಸಾಧ್ಯ ಎಂದರು.
ಈ ವೇಳೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಡಾ.ಅಜಯಸಿಂಗ್, ಕನೀಜ ಫಾತಿಮಾ, ಎಂ.ವೈ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಅಲ್ಲಂಪ್ರಭು ಪಾಟೀಲ ಇದ್ದರು.