Advertisement
ಈ ನಿಟ್ಟಿನಲ್ಲಿ ಶಾಸನ ರಚನೆಯಲ್ಲೂ ಮಹಿಳೆಯರು ತೊಡಗಿಸಿಕೊಳ್ಳುವಂತಾಗಲು ಸಂಸತ್ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಕನಿಷ್ಠ ಶೇ.33ರಷ್ಟು ಮೀಸಲಾತಿ ಸಿಗುವಂತೆ ಸಂಸತ್ತಿನಲ್ಲಿ 1996ರಿಂದ ಬಾಕಿ ಇರುವ ಮಸೂದೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ರಾಜ್ಯ ಸರಕಾರಿ ನೌಕರರ ಸಂಘ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಬಿ.ಪಿ.ಮಂಜೇಗೌಡ ಮಾತನಾಡಿ, ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಏಳನೇ ವೇತನ ಆಯೋಗ ರಚಿಸುವ ಘೋಷಣೆ ಮಾಡಿರುವ ಮುಖ್ಯಮಂತ್ರಿ ಕಾರ್ಯ ಸ್ವಾಗತಾರ್ಹ. ಆದರೆ, ವೇತನ ಆಯೋಗ ಅಂತಿಮ ವರದಿ ನೀಡುವ ಮೊದಲೇ ನೌಕರರಿಗೆ ಶೇ.30ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಬೇಕು. ಖಾಲಿ ಇರುವ ಹು¨ªೆಗಳನ್ನು ಭರ್ತಿ ಮಾಡಬೇಕೆಂದು ಮನವಿ ಮಾಡಿದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕ ಪ್ರೌಢಶಿಕ್ಷಣ ಪರೀûಾ ಮಂಡಳಿ ನಿರ್ದೇಶಕಿ ಯಶೋಧಾ ಬೋಪಣ್ಣ (ಆಡಳಿತ), ಜಗದಾಳೆ ವೈಜ್ಞಾನಿಕ ಸಂಶೋಧನಾ ಫೌಂಡೇಶನ್‌ನ ಉಪಾಧ್ಯಕ್ಷೆ ಪ್ರೇಮಾ ಮಂಜುನಾಥ್ (ಮಹಿಳಾ ಅಭಿವೃದ್ಧಿ), ಸಮಾಜ ಸೇವಕಿ ರಾಧಾ ದಾಸ್ (ಮಹಿಳಾ ಅಭಿವೃದ್ಧಿ), ಕೃಷಿಮತ್ತು ಸಮಾಜ ಸೇವಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರೇಮಾ ತಿಮ್ಮನಗೌಡರ್, ಛಾಯಾಚಿತ್ರ ಕ್ಷೇತ್ರದಲ್ಲಿ ಅಶ್ವಿನಿ ನಿತಿನ್ ಅವರನ್ನು ಸನ್ಮಾನಿಸಲಾಯಿತು.
ಮೇಯರ್ ಜಿ.ಪದ್ಮಾವತಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ನೌಕರರ ಸಂಘದ ಗೌರವಾಧ್ಯಕ್ಷ ಎಚ್.ಕೆ.ರಾಮು, ಖಜಾಂಚಿ ಯೋಗಾನಂದ, ಪ್ರಧಾನ ಕಾರ್ಯದರ್ಶಿ ಮಾಲತೇಶ ವೈ.ಉಣ್ಣಿಗೆರೆ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.