Advertisement

CM Siddaramaiah: ರಾಜ್ಯದ ಜನತೆಗೆ ಕೃತಜ್ಞತೆ ಹೇಳಲು ಹಾಸನದಲ್ಲಿ ಸಮಾವೇಶ

01:08 AM Dec 02, 2024 | Team Udayavani |

ಬೆಂಗಳೂರು: ರಾಜ್ಯದ ಜನರಿಗೆ ಕೃತಜ್ಞತೆ ಹೇಳುವ ಸಲುವಾಗಿ ಹಾಸನದಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನೂ ಆಹ್ವಾನಿಸಲಾಗಿದ್ದು ಇಡೀ ಪಕ್ಷ ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

Advertisement

ಸಿದ್ದರಾಮಯ್ಯ ಜೆಡಿಎಸ್‌ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗಲೂ ಮಾಡುತ್ತಿದ್ದಾರೆ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ಅನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಬೇಕಾಯಿತು.

ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ . ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್‌ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ. ಕಾಂಗ್ರೆಸ್‌ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next