ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಂಕಿನ ಗಂಭೀರ ಗುಣಲಕ್ಷಣ ಇಲ್ಲದವರನ್ನು ಸ್ಟೆಪ್‌ಡೌನ್ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲು ನಿರ್ಧರಿಸಿದ್ದೇವೆ. ಇದರಿಂದ ಕೊರೊನಾ ಸೋಂಕಿತರಿಗೆ ಅಗತ್ಯವಿರುವೆಡೆ ಹಾಸಿಗೆವ್ಯವಸ್ಥೆ ಮಾಡಲು ಸಾಧ್ಯವಿದೆ ಎಂದುಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಹೇಳಿದರು.
ಶುಕ್ರವಾರ ಕೋವಿಡ್ ಚಿಕಿತ್ಸೆ ಶಿಷ್ಟಾಚಾರ ಸಮಿತಿಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಜ್ಞರು ಕೊಟ್ಟ ವರದಿ ಪ್ರಕಾರ ಶೇ.30ರಿಂದ 40ರಷ್ಟುಗಂಭೀರವಲ್ಲದ ಸೋಂಕಿತರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಇವರೆಲ್ಲರನ್ನೂ ಸ್ಟೆಪ್ ಡೌನ್ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದರು.
ಇದರಿಂದ ಖಾಲಿಯಾಗುವ ಹಾಸಿಗೆ ಗಂಭೀರಸ್ಥಿತಿಯಲ್ಲಿರುವ ಸೋಂಕಿತರಿಗೆ ಲಭ್ಯವಾಗುತ್ತವೆ. ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ. ಆದಷ್ಟು ಬೇಗ ಈ ಕಾರ್ಯ ಆಗಬೇಕು. ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳು ಕೂಡಕಡ್ಡಾಯವಾಗಿ ಈ ನಿರ್ಣಯವನ್ನುಜಾರಿಗೆ ತರಬೇಕು. ನೋಡಲ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಈಪ್ರಕ್ರಿಯೆ ಕಟ್ಟುನಿಟ್ಟಾಗಿ ನಡೆಯಬೇಕುಎಂದು ಸೂಚಿಸಿದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ.90ಕ್ಕಿಂತಕಡಿಮೆ ಸ್ಯಾಚುರೇಷನ್ ಇರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಹಣ ಕೊಡುತ್ತಾರೆಂದುಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳುವಂತಿಲ್ಲ.ಇದು ಖಾಸಗಿ ಆಸ್ಪತ್ರೆಗಳಿಗೂ ಕಡ್ಡಾಯವಾಗಿಅನ್ವಯವಾಗುತ್ತದೆ ಎಂದು ನಿರ್ದೇಶಿಸಿದರು.
ರಿಮೋಟ್ ಐಸಿಯು: ರಿಮೋಟ್ ಐಸಿಯು ವ್ಯವಸ್ಥೆಯನ್ನು ಕೆಲ ದಿನಗಳಲ್ಲಿಯೇ ಅನುಷ್ಠಾನಕ್ಕೆತರಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಯಾವ ಚಿಕಿತ್ಸೆ ನೀಡಲಾಗುತ್ತಿದೆ? ಅವರ ಆರೋಗ್ಯ ಹೇಗಿದೆ? ಎಂಬ ಮಾಹಿತಿಯನ್ನುಸಂಬಂಧಿಕರಿಗೆ ನೀಡುವುದು ಕಡ್ಡಾಯ. ವೈದ್ಯರುಈ ಬಗ್ಗೆ ಸಂಬಂಧಿಕರಿಗೆ ಸಮರ್ಪಕ ಮಾಹಿತಿ ನೀಡಲಾಗುತ್ತಿಲ್ಲ ಎಂದು ದೂರುಗಳು ಬರುತ್ತಿವೆ. ಸಾವುಗಳ ಬಗ್ಗೆಯೂ ಸಮರ್ಪಕ ಆಡಿಟ್‌ನಡೆಯಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ಬರ್ , ಇಲಾಖೆಆಯುಕ್ತ ತ್ರಿಲೋಕ ಚಂದ್ರ, ಡಿಸಿಎಂ ಅವರಕಾರ್ಯದರ್ಶಿ ಪ್ರದೀಪ್, ಚಿಕ್ಸಿತೆಯ ಶಿಷ್ಟಾಚಾರಸಮಿತಿ ಅಧ್ಯಕ್ಷರೂ ಆದ ರಾಜೀವ್ ಗಾಂಧಿಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ ಸೇರಿ ಹಿರಿಯ ವೈದರು ಇದ್ದರು.