Advertisement

ಪ್ರಮುಖ ದೇಗುಲಗಳ ಮೃತ್ತಿಕೆ ಅಯೋಧ್ಯೆಗೆ

10:53 AM Jul 22, 2020 | mahesh |

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಸಂಗ್ರಹಿಸಿ ದ.ಕ. ಜಿಲ್ಲಾ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಲಯದಿಂದ ಮಂಗಳವಾರ ಅಯೋಧ್ಯೆಗೆ ಕಳುಹಿಸಿಕೊಡಲಾಯಿತು. ಈ ವೇಳೆ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಹಲವು ವರ್ಷಗಳ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿನ ಸನ್ನಿಹಿತವಾಗುತ್ತಿದೆ. ರಾಮರಾಜ್ಯ ಆಗಬೇಕು, ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಪ್ರತಿ ಹಿಂದೂಗಳ ಕನಸಾಗಿತ್ತು. ಆ. 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳ ಪವಿತ್ರ ಮಣ್ಣನ್ನು ಅಯೋಧ್ಯೆಗೆ ಕಳುಹಿಸಿಕೊಡಲಾಗುತ್ತಿದೆ ಎಂದರು.

Advertisement

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕದ್ರಿ, ಮಂಗಳಾದೇವಿ, ಕಟೀಲು, ಪೊಳಲಿ, ಸೋಮೇಶ್ವರ ದೇವಸ್ಥಾನಗಳಿಂದ ಪವಿತ್ರ ಮಣ್ಣನ್ನು ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ. ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಜಿಲ್ಲಾಧ್ಯಕ್ಷ ಗೋಪಾಲ್‌ ಕುತ್ತಾರ್‌, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್‌, ಜಿಲ್ಲಾ ಸಹ ಕಾರ್ಯದರ್ಶಿ ಸುರೇಖಾ ರಾಜ್‌, ಬಜರಂಗದಳ ವಿಭಾಗ ಸಂಚಾಲಕ ಭುಜಂಗ ಕುಲಾಲ್‌, ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ, ವಸಂತ ಗುರುಪುರ, ಪ್ರವೀಣ್‌ ಕುತ್ತಾರ್‌, ನವೀನ್‌ ಮೂಡುಶೆಡ್ಡೆ, ಪ್ರದೀಪ್‌ ಸರಿಪಳ್ಳ, ದೀಪಕ್‌ ಮರೋಳಿ, ವಾಸುದೇವ ಗೌಡ, ವಿಷ್ಣು ಕಾಮತ್‌ ಗುರುಪುರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next