Advertisement

ಮಹಿಳಾ ಕಾಲೇಜು ಕಟ್ಟಡಕ್ಕೆ ಅನುದಾನ ನೀಡಲು ಒತ್ತಾಯ

03:55 PM Nov 01, 2019 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಕಳೆದಆರೇಳು ವರ್ಷಗಳಿಂದ ಅನುದಾನ ಇಲ್ಲದೇ ಕಾಮಗಾರಿ ಕುಂಟುತ್ತಾ ಸಾಗಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜು ಕಟ್ಟಡಕ್ಕೆ ಅಗತ್ಯ ಅನುದಾನ ನೀಡುವಂತೆ ಕೋರಿ ಎಬಿವಿಪಿ ಮುಖಂಡರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವಡಾ.ಸಿ.ಎನ್‌.ಅಶ್ವತ್ಥನಾರಾಯಣಗೆ ಮನವಿ ಸಲ್ಲಿಸಿದರು.

Advertisement

ಇತ್ತೀಚೆಗೆ ಜಿಲ್ಲೆಗೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣಗೆ, ಎಬಿವಿಪಿ ಮುಖಂಡರು ಮನವಿ ಸಲ್ಲಿಸಿ ಸರ್ಕಾರಿ ಮಹಿಳಾ ಕಾಲೇಜು ಕಟ್ಟಡ ಅನುದಾನ ಇಲ್ಲದೇ ನೆನಗುದಿಗೆಬಿದ್ದಿರುವುದನ್ನು ಗಮನಕ್ಕೆ ತಂದರು.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಪದವಿ ಕಾಲೇಜಿನಲ್ಲಿಸಾವಿರಾರು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ಕಟ್ಟಡ ಮತ್ತಿತರ ಮೂಲ ಸೌಕರ್ಯಗಳ ಕೊರತೆಯಿಂದ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆ ಆಗಿದ್ದು, ಸರ್ಕಾರ ಈ ಬಗ್ಗೆಗಮನ ಹರಿಸಿ ಕಾಲೇಜಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಲಮಿತಿಯೊಳಗೆ ಕಟ್ಟಡ ಕಾಮಗಾರಿಪೂರ್ಣಗೊಳಿಸಬೇಕು. ಇದರಿಂದ ಜಿಲ್ಲೆಯ ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂದು ಎಬಿವಿಪಿ ಮುಖಂಡರು ಸಚಿವರ ಗಮನ ಸೆಳೆದರು. ವಿದ್ಯಾರ್ಥಿಮುಖಂಡರ ಮನವಿಗೆ ಸ್ಪಂದಿಸಿದಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next