ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಸಂಸದ ನಳಿನ್‌ಕುಮಾರ್ ಕಟೀಲು ಅವರು ಎಂಆರ್‌ಪಿಎಲ್‌ನ ಆಡಳಿತ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಎಂಆರ್‌ಪಿಎಲ್ 200 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಈ ನೇಮಕಾತಿಯಲ್ಲಿ ಕರ್ನಾಟಕ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಂಸದರ ಅಧ್ಯಕ್ಷತೆಯಲ್ಲಿ ಶನಿವಾರ ಎಂಆರ್‌ಪಿಎಲ್‌ನ ಆಡಳಿತ ನಿರ್ದೇಶರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರಗಿತು.
ನೇಮಕಾತಿಯನ್ನು ತಡೆಹಿಡಿಯಬೇಕು. ಮುಂದಿನ ನೇಮಕಾತಿ ಸಂದರ್ಭ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸೂಚಿಸಲಾಯಿತು. ನೇಮಕಾತಿಯನ್ನು ತಡೆಹಿಡಿಯುವುದಾಗಿ ಎಂಆರ್‌ಪಿಎಲ್ ಆಡಳಿತ ನಿರ್ದೇಶಕರು ಸಭೆಗೆ ತಿಳಿಸಿದರು.
ಇದನ್ನೂ ಓದಿ :ನೆಟ್ ಬ್ಯಾಂಕಿಂಗ್ ಗ್ರಾಹಕರೇ ಗಮನಿಸಿ : ಭಾನುವಾರ ಮಧ್ಯಾಹ್ನದವರೆಗೆ NEFT ಅಲಭ್ಯ
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್ ಉಮಾನಾಥ ಕೋಟ್ಯಾನ್, ಡಾ| ವೈ. ಭರತ್ ಶೆಟ್ಟಿ ಭಾಗವಹಿಸಿದ್ದರು.