Advertisement

ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಜಾರಿಗೆ ಸೂಚನೆ

02:55 PM Jan 28, 2020 | Suhan S |

ಹಾವೇರಿ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ತಂಬಾಕು ಪದಾರ್ಥಗಳಿಗೆ ಸಂಬಂಧಿಸಿದಂತೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಜಾಹೀರಾತು ಮಾಡುವವರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಕಚೇರಿಗಳನ್ನಾಗಿ ಘೋಷಿಸಲು ಕೋಟಾ³-2003ರ ಕಲಂ 4ರ ಧೂಮಪಾನ ನಿಷೇಧಿತ ಪ್ರದೇಶ ಎಂಬ 60×45 ಸೇ. ಮೀ. ಅಳತೆಯ ನಾಮ ಫಲಕವನ್ನು ಪ್ರವೇಶದ್ವಾರದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಅಳವಡಿಸಬೇಕು ಎಂದು ಸೂಚಿಸಿದರು.

ಶಾಲಾ-ಕಾಲೇಜುಗಳ ಅವರಣದಿಂದ 100ಮೀ. ಅಂತರದೊಳಗೆ ತಂಬಾಕು ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಅನಿರೀಕ್ಷಿತ ದಾಳಿ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ಯಾವುದೇ ದಾಳಿಯ ಸಂದರ್ಭದಲ್ಲಿ ತನಿಖಾ ತಂಡದೊಂದಿಗೆ ದಾಳಿಯಲ್ಲಿ ಭಾಗವಹಿಸುವಂತೆ ಸೂಚಿಸಿದರು. ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಎನ್‌ಎಸ್‌ ಎಸ್‌ ಶಿಬಿರಗಳಲ್ಲಿ ಹಾಗೂ ಸಭೆಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ| ಜಗದೀಶ್‌ ಪಾಟೀಲ್‌ ಅವರು ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಆಯೋಜಿಸಲಾದ ಸಭೆ, ಕಾರ್ಯಕ್ರಮಗಳು ಹಾಗೂ ದಾಳಿ ಕುರಿತು ಮಾಹಿತಿ ನೀಡಿದರು.

Advertisement

ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ| ಸಂತೋಷ್‌ ದಡ್ಡಿ, ದಾದಾಪೀರ್‌ ಹುಲಿಕಟ್ಟಿ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರಭಾಕರ ಕುಂದೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next