Advertisement
ನಗರದ ಜಿಲ್ಲಾ ನ್ಯಾಯವಾಗಳ ಸಂಘದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ವಿಶ್ವ ತಂಬಾಕು ರಹಿತ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ ಸರ್ಕಾರ ಈಗಾಗಲೇ ಕಾಯ್ದೆ ಜಾರಿಗೊಳಿಸಿದೆ. ಇದರ ಪ್ರಕಾರ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸಾರಿಗೆ, ಹೊಟೇಲ್, ಉದ್ಯಾನವನ, ಆಸ್ಪತ್ರೆ, ಶಾಲೆಗಳು ಇತ್ಯಾದಿ ಕಡೆಗಳಲ್ಲಿ ಧೂಮಪಾನ ಮಾಡಿದರೆ ರೂ. 200 ದಂಡ ವಿಧಿಸಲು ಅವಕಾಶವಿದೆ. 18ವರ್ಷದ ಒಳಗಿನವರಿಗೆ ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದ್ದು, ಇದರ ಉಲ್ಲಂಘನೆಗೆ ರೂ. 200ದಂಡ ವಿಧಿಸಲಾಗುವುದು. ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕಾದುದು ಎಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಡೆಸುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಿನೋದ ಭುತೆ ಅವರು ತಂಬಾಕು ಸೇವನೆಯಿಂದಾಗುವ ದುಷ್ಟಪರಿಣಾಮಗಳು, ನ್ಯಾಯವಾದಿ ನಿತಿನ ರಾಯ್ಕರ ಅವರು ಕೋಟ್ಪಾ ಕಾಯ್ದೆ 2003 ಹಾಗೂ ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಕುರಿತು ಉಪನ್ಯಾಸ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೊವಿಂದಯ್ಯ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಜಾಗೃತಿ ಜಾಥಾ: ವೇದಿಕೆ ಕಾರ್ಯಕ್ರಮ ಮುನ್ನ ಬೆಳಗ್ಗೆ 9:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಅಂಗವಾಗಿ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.