Advertisement

ತಂಬಾಕು ಸೇವಿಸಿ ಉಗುಳಿದರೆ ದಂಡ ವಿಧಿಸಿ: ಡಿಸಿ ರವಿಂದ್ರ

11:56 AM Sep 11, 2020 | Suhan S |

ದೇವನಹಳ್ಳಿ: ಕೋವಿಡ್‌ -19 ಹಿನ್ನೆಲೆಯಲ್ಲಿ ಬೀಡಿ, ಸಿಗರೇಟ್‌, ಗುಟ್ಕಾ, ಪಾನ್‌ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿಯುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ ¤ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಸೂಚಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿಸಭಾಂಗಣದಲ್ಲಿನಡೆದಜಿಲ್ಲಾತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರಿವು ಮೂಡಿಸಿ:ಆಹಾರ ಭದ್ರತಾ ಕಾಯ್ದೆ ಉಲ್ಲಂಘಿಸುವ ಹೋಟೆಲ್‌ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಎಂದರಲ್ಲದೆ, 2003 ರ ಕೋಟ್ಪಾ ಕಾಯಿದೆಯಡಿಯಲ್ಲಿ ಸೆಕ್ಷನ್‌ 4 ಮತ್ತು  6ಬಿಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಗಜ ಅಂತರದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವಂತಿಲ್ಲ ಎಂದರು. ಅಲ್ಲದೆ, ಶಾಲಾ-ಕಾಲೇಜು ಮಕ್ಕಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆಂದರು.

ದಂಡ ವಿಧಿಸಿ: ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ,ಸಿಗರೇಟು, ಗುಟ್ಕಾ, ಪಾನ್‌ ಮಸಾಲ ಜಗಿಯುವವರ ವಿರುದ್ಧ ಆರೋಗ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಂಡವಿಧಿಸುವುದರಂದಿಗೆ ಜಾಗೃತಿ ಮೂಡಿಸಬೇಕೆಂದರು. ಧೂಮಪಾನ ಮಾಡುವುದರಿಂದ, ತಂಬಾಕು ಸೇವನೆಯಿಂದಾಗಿ ಉಂಟಾಗುವ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್‌, ಹೃದಯ, ಶ್ವಾಸ ಸಂಬಂಧಿ ಇತ್ಯಾದಿ ಮಾರಣಾಂತಿಕ ಕಾಯಿಲೆಗಳು, ಗರ್ಭಪಾತ, ಗರ್ಭಧಾರಣೆಯಲ್ಲಿ ಕುಂಠಿತ, ತಂಬಾಕು ಸೇವನೆಯಿಂದದಂತ ಕ್ಷಯರೋಗ  ಸೇರಿದಂತೆ ದುಷ್ಪರಿಣಾಮ ಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜುವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವ ಶಿಬಿರಗಳನ್ನು ಹಮ್ಮಿಕೊಳ್ಳಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿಗಳು ಸಾಮಾಜಿಕ ಕಳ ಕಳಿಯೊಂದಿಗೆತಂಬಾಕುಉತ್ಪನ್ನಗಳನ್ನುಸೇವಿಸುವವರಿಗೆ ತಂಬಾಕು ಸೇವನೆ ತ್ಯಜಿಸಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಮನವೊಲಿಸುವಂತೆ ತಿಳಿಸಿದರು. ವ್ಯಸನ ಮುಕ್ತರು:ಜಿಲ್ಲಾ ತಂಬಾಕುನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಡಾ.ವಿದ್ಯಾರಾಣಿ ಮಾತನಾಡಿ, ಕಳೆದ ವರ್ಷ ತಂಬಾಕು ನಿಯಂತ್ರಣ ಘಟಕದ ಕಾರ್ಯಾಚರಣೆಯಲ್ಲಿ 520 ಪ್ರಕರಣ ದಾಖಲು ಮಾಡಲಾಗಿದ್ದು, 85,200 ರೂ. ದಂಡ ಸಂಗ್ರಹಿಸಲಾಗಿದೆ. 1156 ಜನ ಚಿಕಿತ್ಸೆಗೆನೋಂದಣಿಯಾಗಿದ್ದು, ಇದರಲ್ಲಿ 44 ಜನ ಸಂಪೂರ್ಣವಾಗಿ ತಂಬಾಕು ಚಟದಿಂದ ಮುಕ್ತರಾಗಿದ್ದಾರೆಂದರು.

ಗುಲಾಬಿ ಚಳವಳಿ (ರೋಸ್‌ ಕ್ಯಾಂಪೇನ್‌) ಕಾರ್ಯಕ್ರಮದ ಮೂಲಕ ತಂಬಾಕು ಸೇವನೆ ದುಷ್ಪರಿಣಾಮ, ನಿಯಂತ್ರಣದ ಕುರಿತು ಅರಿವು ಮೂಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೆ‌ಕ್ಷಣಾಧಿಕಾರಿ ಡಾ.ಧರ್ಮೆಂದ್ರ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next