Advertisement
ನಗರದ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ವಕೀಲರ ಸಂಘದ ವತಿಯಿಂದ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
401 ಪ್ರಕರಣ ದಾಖಲು: ತಂಬಾಕಿನಿಂದಾಗುವ ದುಷ್ಪರಿಣಾಮಗಳು ಹಾಗೂ ಅಕ್ರಮವಾಗಿ ಮಾರಾಟ ಮಾಡುವ ಮತ್ತು ಸೇವನೆ ಮಾಡುವವರಿಗೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ದಂಡ ವಿಧಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ 401 ಪ್ರಕರಣ ದಾಖಲಿಸಲಾಗಿದ್ದು, 58,700 ರೂ. ದಂಡ ವಿಧಿಸಲಾಗಿದೆ. ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ತೆರೆಯಲಾಗಿದ್ದು, 56 ತಂಬಾಕು ವ್ಯಸನಿಗಳನ್ನು ವ್ಯಸನದಿಂದ ಬಿಡಿಸಲಾಗಿದೆ ಎಂದು ತಿಳಿಸಿದರು.
ಕಾನೂನು ಅರಿವು ಅಗತ್ಯ: ವಕೀಲೆ ಜೆ.ಮಂಜುಳಾ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷದ ಮೇ 31ರಂದು ವಿಶ್ವ ತಂಬಾಕು ರಹಿತ ದಿನವೆಂದು ಘೋಷಿಸಿದೆ. ತಂಬಾಕು ಮುಕ್ತ ದೇಶ ನಿರ್ಮಿಸುವ ಪಣತೊಟ್ಟು, ತಂಬಾಕು ಸೇವನೆಯಿಂದಾಗುವ ಮಾರಣಾಂತಿಕ ಕಾಯಿಲೆಗಳಿಗೆ ಮುಕ್ತಾಯ ಹಾಡಲು ಜಾಗೃತಿ ಮೂಡಿಸುವ ಪ್ರಯತ್ನ ಇದಾಗಿದೆ. ಈ ಸಾಲಿನ ತಂಬಾಕು ದಿನಾಚರಣೆಯನ್ನು ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುಕೊಳ್ಳುವುದರೊಂದಿಗೆ ಕಾನೂನು ಅರಿವು ಸಹ ಅಗತ್ಯವಾಗಿದೆ ಎಂದರು.
ವಕೀಲ ಡಿ.ಎಂ.ರೇಣುಕಾ ಮೂರ್ತಿ ಕೋಟ್ಪಾ ಕಾಯ್ದೆ ಕುರಿತು ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಬಿ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜೆ, ತಾಲೂಕು ಆರೋಗ್ಯಾಧಿಕಾರಿ ಡಾ.ಶರ್ಮಿಳಾ ಹೆಡೆ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಅಸಾದುಲ್ಲಾಖಾನ್, ಗೌರವ ಅಧ್ಯಕ್ಷ ರಾ.ಬೈರೇಗೌಡ, ಹಿರಿಯ ವಕೀಲ ಎ.ಆರ್.ನಾಗರಾಜನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್ವರಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ನರಸಿಂಹಮೂರ್ತಿ ಭಾಗವಹಿಸಿದ್ದರು.