Advertisement

ತಂಬಾಕು ಉತ್ಪನ್ನ ಬಳಕೆಗೆ ನಿಷೇಧ

05:39 PM May 06, 2020 | Suhan S |

ಹಾವೇರಿ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸುವುದನ್ನು ಹಾಗೂ ಉಗುಳುವುದನ್ನು ನಿಷೇಧಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement

ಕೋವಿಡ್‌-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯ, ನ್ಯುಮೋನಿಯಾ ಮತ್ತು ಕೋವಿಡ್‌-19 ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಸಾಧ್ಯತೆ ಇದೆ. ಬೀಡಿ, ಸಿಗರೇಟ್‌ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು. ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಉತ್ಪನ್ನಗಳನ್ನು ಜಿಲ್ಲೆಯಾದ್ಯಂತ ಬಳಸುವುದನ್ನು ನಿಷೇಧಿಸಲಾಗಿದೆ.

ಒಂದೊಮ್ಮೆ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ-1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ-2005 ಐಪಿಸಿ-ಕಲಂ 188, 268, 269 ಮತ್ತು 270 ಸಿ ಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಉಲ್ಲಂಘಿತರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next