Advertisement
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿಯಲ್ಲಿ 18 ಅಂಗಡಿಗಳ ಮಾಲೀಕರಿಂದ 1230 ರೂ. ದಂಡ ವಸೂಲಿ ಮಾಡಲಾಗಿದೆ. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ| ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ಜಿ.ವಿ.ಕುಂದಗೋಳ, ತಾಲೂಕು ಆರೋಗ್ಯ ಕಚೇರಿ ಹಾಗೂ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಇತರರು ಇದ್ದರು. Advertisement
ತಂಬಾಕು ಉತ್ಪನ್ನ ಮಾರಾಟ; ಅಧಿಕಾರಿಗಳಿಂದ ದಂಡ ವಸೂಲಿ
01:20 PM Nov 24, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.