Advertisement

ಸಚಿವಾಕಾಂಕ್ಷಿಗಳಲ್ಲಿ ಕುತೂಹಲ; ಇಂದು ಸಿಎಂ ದಿಲ್ಲಿಗೆ

12:40 AM Feb 07, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಲ್ಲಿಗೆ ತೆರಳುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ವಿಶೇಷವಾಗಿ ಸಚಿವಾಕಾಂಕ್ಷಿಗಳಲ್ಲಿ ಸಂಪುಟ ಪುನಾರಚನೆಯ ನಿರೀಕ್ಷೆ ಗರಿಗೆದರಿವೆ.

Advertisement

ಬೊಮ್ಮಾಯಿ ಎರಡು ದಿನಗಳ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ದಿಲ್ಲಿಗೆ ತೆರಳುತ್ತಿದ್ದು, ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಲಿದ್ದಾರೆ. ಜತೆಗೆ ನಮ್ಮ ಸಂಸದರೊಂದಿಗೆ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಮಟ್ಟದಲ್ಲಿ ಆಗಬೇಕಿರುವ ಕೆಲಸಗಳ ಕುರಿತು ಚರ್ಚಿಸಲು ನಿರ್ಧರಿಸಿದ್ದಾರೆ.

ಈ ಕುರಿತು ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಮುಂದಿನ ತಿಂಗಳು ರಾಜ್ಯ ಬಜೆಟ್‌ ಇರುವ ಕಾರಣ ಹಲವಾರು ಯೋಜನೆಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಲಿದ್ದೇನೆ. ಅಂತಾರಾಜ್ಯ ಜಲವಿವಾದ ವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಚರ್ಚಿಸಿ, ಪ್ರಮುಖ ನಿರ್ಣಯ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.

ಸಮಯ ಪಡೆಯುವ ಲೆಕ್ಕಾಚಾರ
ವರಿಷ್ಠರೊಂದಿಗೆ ಸಂಪುಟ ಕುರಿತು ಚರ್ಚಿಸಿದರೂ ರಾಜ್ಯ ಬಜೆಟ್‌ ಅಧಿವೇಶನ ಮುಗಿದ ಬಳಿಕವಷ್ಟೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.

ನದಿ ಜೋಡಣೆ ಚರ್ಚೆ?
ಕೇಂದ್ರ ಸರಕಾರ ಬಜೆಟ್‌ನಲ್ಲಿ ಅಂತಾರಾಜ್ಯ ನದಿ ಜೋಡಣೆ ಮಾಡುವ ಬಗ್ಗೆ ಪ್ರಸ್ತಾವಿಸಿದ್ದು, ಈ ಬಗ್ಗೆ ರಾಜ್ಯ ಸರಕಾರ ಗೊಂದಲಕ್ಕೊಳಗಾಗಿದೆ. ಹೀಗಾಗಿ ಭೇಟಿ ವೇಳೆ, ಕೇಂದ್ರದೊಂದಿಗೆ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಗಳು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ರಾಜ್ಯದ ನಿಲುವನ್ನು ಕೇಂದ್ರಕ್ಕೆ ತಿಳಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next