Advertisement

ವೈದ್ಯರ ಮೇಲೆ ಹಲ್ಲೆ ಖಂಡಿಸಿ ಇಂದು ಪ್ರತಿಭಟನೆ

12:27 PM Jan 17, 2017 | |

ಬೆಂಗಳೂರು: ಕರ್ತವ್ಯ ನಿರತ ವೈದ್ಯರ ಮೇಲಿನ ದೌರ್ಜನ್ಯ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು (ಐಎಂಎ)  ರಾಜ್ಯಾದ್ಯಂತ ಮಂಗಳವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಹಮ್ಮಿಕೊಂಡಿದೆ. ಇತ್ತೀಚೆಗೆ ವೈದ್ಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ.

Advertisement

ತುರ್ತು ವೇಳೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದಿರುವುದಕ್ಕೆ ವೈದ್ಯರನ್ನೇ ಹೊಣೆ ಮಾಡುತ್ತಿರುವುದು ದುರದುಷ್ಟಕರ. ಅಲ್ಲದೆ, ಸರ್ಕಾರದಿಂದ ಸೂಕ್ತವಾದ ರಕ್ಷಣೆ ಸಿಗುತ್ತಿಲ್ಲ. ಇದನ್ನು ಖಂಡಿಸಿ ರಾಜ್ಯದಲ್ಲಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಐಎಂಎ ರಾಜ್ಯ ವಲಯ ಅಧ್ಯಕ್ಷ ರಾಜಶೇಖರ್‌ ಬಳ್ಳಾರಿ ಹೇಳಿದ್ದಾರೆ.

ಆಸ್ಪತ್ರೆಗಳನ್ನು ಬಂದ್‌ ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಆಸ್ಪತ್ರೆಯ ಸೇವೆಯಲ್ಲಾಗಲಿ ಅಥವಾ ವೈದ್ಯರ ಸೇವೆಯಲ್ಲಾಗಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಲಿದ್ದಾರೆ.

ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಅಶ್ವಾಸನೆ ನೀಡಿದ್ದಾರೆ.  ವೈದ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವ ಸಂಬಂಧ ಕೇಂದ್ರ ಸರ್ಕಾರ  ಕಾನೂನನ್ನು ಬಲಿಷ್ಠಗೊಳಿಸಿ ವೈದ್ಯರು ಸೇರಿದಂತೆ ಆರೋಗ್ಯ ಸೇವೆಯಲ್ಲಿನ ನೌಕರರನ್ನು ರಕ್ಷಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next