ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ತನ್ನ ಮೈತ್ರಿ ಪಕ್ಷದೊಂದಿಗೆ ಸೀಟು ಹೊಂದಾಣಿಕೆ ಜೊತೆಗೆ ತನ್ನ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದಟಛಿಪಡಿಸಲು ದೆಹಲಿಯಲ್ಲಿ ರಾಜ್ಯ ಉಸ್ತು ವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸೋಮವಾರ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಲಿದೆ. ಸಭೆಯಲ್ಲಿ ಐವರು ರಾಜ್ಯ ಉಸ್ತುವಾರಿ ಕಾರ್ಯದರ್ಶಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಮಿತಿ ಸದಸ್ಯರಾಗಿದ್ದಾರೆ. ಈ ವೇಳೆ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಸೀಟು ಬಿಟ್ಟು ಕೊಡುವ 7-8 ಸ್ಥಾನ ಹೊರತುಪಡಿಸಿ, ಉಳಿದ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.
ಇಂದು ನಿರ್ಧಾರ: ರಾಜ್ಯದಲ್ಲಿ ಕಾಂಗ್ರೆಸ್‌ನ 10 ಹಾಲಿ ಸಂಸದರಿದ್ದು ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಆದರೆ,
ಕಾಂಗ್ರೆಸ್‌ನ ಹಾಲಿ ಸಂಸದರಿರುವ ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಕ್ಷೇತ್ರಗಳನ್ನು ತನಗೆ
ಬಿಟ್ಟುಕೊಡುವಂತೆ ಜೆಡಿಎಸ್ ಕೇಳಿಕೊಂಡಿರುವುದರಿಂದ ಈ ಮೂರು ಕ್ಷೇತ್ರಗಳಲ್ಲಿ ಯಾವ ಕ್ಷೇತ್ರ ಜೆಡಿಎಸ್ ಪಾಲಾಗುತ್ತದೆ ಎನ್ನುವ ಬಗ್ಗೆ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ.