Advertisement

ಕೋವಿಡ್ ರಣಕೇಕೆ : ರಾಜ್ಯದಲ್ಲಿಂದು 19067 ಮಂದಿಗೆ ಸೋಂಕು, 81 ಸಾವು!

06:43 PM Apr 18, 2021 | Team Udayavani |

ಬೆಂಗಳೂರು : ದೇಶದಲ್ಲಿ ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಕಳೆದ 24 ಗಂಟೆಗಳ ಅವಧಿಯಲ್ಲಿ (ದಿನಾಂಕ : 17.04. 2021, 00:00 ರಿಂದ 23 : 59ರವರೆಗೆ) ಬರೋಬ್ಬರಿ 19067 ಪ್ರಕರಣಗಳು ಪತ್ತೆಯಾಗಿವೆ. ಈ  ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 133543ಕ್ಕೆ ಏರಿಕೆಯಾಗಿದೆ.

Advertisement

ಇನ್ನು ಕೋವಿಡ್ ಮಹಾಮಾರಿಯಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಇಂದು 81 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 13351ಕ್ಕೆ ಏರಿಕೆಯಾಗಿದೆ.

ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾಗಿ 4603 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾಗಿ ಬರೋಬ್ಬರಿ 1014152 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು : ಇಂದು ಬೆಂಗಳೂರಿನಲ್ಲಿ 12793 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 60 ಜನ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next