Advertisement

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

12:57 AM May 01, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೇ 1ರಂದು ಸಂಜೆ 6.45ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

Advertisement

123 ಜೊತೆ ವಧು-ವರರು ಹೆಸರು ನೋಂದಾಯಿಸಿದ್ದಾರೆ. ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಲಾಗುತ್ತದೆ.

ಬುಧವಾರ ಬೆಳಗ್ಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಧು-ವರರಿಗೆ ಸೀರೆ, ರವಿಕೆ ಕಣ, ಧೋತಿ ಮತ್ತು ಶಾಲು ವಿತರಿಸುವರು. ಸಂಜೆ 5ಕ್ಕೆ ವಧೂ-ವರರು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗುವರು. ಅಲ್ಲಿ ಅವರವರ ಜಾತಿ ಸಂಪ್ರದಾಯದಂತೆ ಒಂದೇ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನೆರವೇರಲಿದೆ.

ಚಿತ್ರ ನಟ ದೊಡ್ಡಣ್ಣ ಭಾಗಿ
ಸಾಮೂಹಿಕ ವಿವಾಹದಲ್ಲಿ ಪ್ರತೀ ವರ್ಷ ಸಿನೆಮಾ ನಟರು ಆಕರ್ಷಣೆಯ ಕೇಂದ್ರವಾಗಿರುತ್ತಾರೆ. ಈ ಬಾರಿ ಚಲನಚಿತ್ರ ನಟ ದೊಡ್ಡಣ್ಣ ಆಗಮಿಸಿ ಶುಭಾಶಂಸನೆ ಮಾಡುವರು. ನವ ದಂಪತಿಗಳು ದೇವರದರ್ಶನ ಮಾಡಿ, ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ಊರಿಗೆ ತೆರಳುವರು. ದಂಪತಿಗೆ ಸರಕಾರದ ವತಿಯಿಂದ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡಲಾಗುತ್ತದೆ.

ದುಂದುವೆಚ್ಚ
ತಡೆಯುವ ಸಂದೇಶ
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದು ವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಧರ್ಮಸ್ಥಳದ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದು, ಪ್ರತೀ ವರ್ಷ ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ 12,777 ಜೊತೆ ಇಲ್ಲಿ ಮದುವೆಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next