Advertisement
ಜಿಲ್ಲಾಡಳಿತ, ಉದ್ಯೋಗ ಮತ್ತು ತರಬೇತಿ ಇಲಾಖೆ, ಸಿಇಒಎಲ್ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವು ಈಗಾಗಲೇ ಪದವಿ, ಸ್ನಾತಕೋತ್ತರ, ನರ್ಸಿಂಗ್, ಐಟಿಐ, ಹೊಟೇಲ್, ಮ್ಯಾನೆಂಜ್‌ಮೆಂಟ್/ ಡಿಪ್ಲೊಮಾ ಕೋರ್ಸನ್ ಪೂರ್ಣಗೊಳಿಸಿರುವವರಿಗೆ ಈ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.
ಸುಮಾರು 10,000ದಷ್ಟು ಅಭ್ಯರ್ಥಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮೇಳದ ಉಸ್ತುವಾರಿ ವಹಿಸಿಕೊಂಡಿರುವ ವಿವೇಕ್ ಆಳ್ವ ತಿಳಿಸಿದರು. ಉದ್ಯೋಗ ಮೇಳದ ಸ್ಥಳದಲ್ಲೇ ನೋಂದಣಿ ಮಾಡಲು ಅವಕಾಶವಿದೆ ಎಂದರು. ಉದ್ಯೋಗ ಮೇಳಕ್ಕಾಗಿ ಈಗಾಗಲೇ ಮಂಗಳೂರು ವಿಶ್ವ ವಿದ್ಯಾನಿಲಯದ 169 ಕೊಠಡಿಗಳನ್ನು ಗೊತ್ತುಪಡಿಸಲಾಗಿದೆ. ಒಟ್ಟು 91 ಕಂಪ್ಯೂಟರ್ ವ್ಯವಸ್ಥೆ ಮಾಡಲಾಗಿದೆ. ಮಂಗಳಗಂಗೋತ್ರಿ ಕ್ಯಾಂಪಸ್‌ನ ಮಾನವಿಕ ವಿಭಾಗ, ವಿಜ್ಞಾನ ಸಂಕೀರ್ಣ, ಮ್ಯಾನೇಜ್ ಮೆಂಟ್ ಬ್ಲಾಕ್‌ನಲ್ಲಿ ಕಂಪೆನಿಗಳನ್ನು ಕ್ರಮವಾಗಿ ವಿಂಗಡಿಸಲಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಮಾಹಿತಿ ಇರುವ ಫಲಕಗಳನ್ನು ಅಳವಡಿಸಲಾಗಿದೆ.
Related Articles
ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಕೋಣಾಜೆವರೆಗೆ ಕೆ.ಎಸ್.ಆರ್ .ಟಿ.ಸಿ. ವತಿಯಿಂದ ವಿಶೇಷ ಬಸ್‌ಗಳ ಸಂಚಾರ ನಡೆಯಲಿದೆ. ನಗರದ ಸ್ಟೇಟ್‌ಬ್ಯಾಂಕ್, ಪಿ.ವಿ.ಎಸ್. ಹಾಗೂ ಪಂಪ್‌ವೆಲ್ ಈ ಮೂರು ಸ್ಥಳಗಳಿಂದ ಬೆಳಗ್ಗೆ 7ಗಂಟೆಯಿಂದ 10 ಗಂಟೆವರೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಅದೇ ರೀತಿ ಅಪರಾಹ್ನ 3 ಗಂಟೆಯಿಂದ ಸಂಜೆ 7 ಗಂಟೆವರೆಗೆ ಕೊಣಾಜೆಯಿಂದ ಮಂಗಳೂರಿಗೆ ವಿಶೇಷ ಬಸ್ ಗಳು ಸಂಚಾರಿಸಲಿವೆ.
Advertisement
ಮಿತದರದಲ್ಲಿ ಊಟದ ವ್ಯವಸ್ಥೆಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮಿತದರದಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಮೊದಲ ಹಂತದಲ್ಲಿ 7,000 ಊಟದ ವ್ಯವಸ್ಥೆಯನ್ನು ನಡೆಸಲಾಗಿದೆ. ಇದರ ಸದುಪಯೋಗ ಪಡೆದು ಕೊಳ್ಳಬಹುದಾಗಿದೆ. ಶನಿವಾರ ಬೆಳಗ್ಗೆ 9.30ಕ್ಕೆ ವಿಶ್ವ ವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಯೋಗ ಮೇಳವನ್ನು ಉದ್ಘಾಟಿಸಲಿದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಭಾಗವಹಿಸಲಿದ್ದಾರೆ. ಸ್ವಯಂ ಸೇವಕರಾಗಿ ವಿದ್ಯಾರ್ಥಿಗಳು
ಮಂಗಳೂರು ವಿವಿಯ ಮಾನವಿಕ ವಿಭಾಗದ ಬಳಿ ಬೆಳಗ್ಗೆ 8 ಗಂಟೆಯಿಂದ ನೋಂದಣಿ ಕೌಂಟರ್ ಕಾರ್ಯಾರಂಭಗೊಳ್ಳಲಿದೆ. ಅಭ್ಯರ್ಥಿಗಳ ಅನುಕೂಲಕ್ಕೆ ಆಳ್ವಾಸ್ ಕಾಲೇಜಿನ 300 ವಿದ್ಯಾರ್ಥಿಗಳು ಮತ್ತು 60 ಸಿಬಂದಿ, ಕೆ.ಪಿ.ಟಿ.ಯ 50 ವಿದ್ಯಾರ್ಥಿಗಳು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.