Advertisement
ಭಾನುವಾರ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ. ಸಂಭಾವ್ಯರ ಪಟ್ಟಿಯೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್‌ಕುಮಾರ್, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಶನಿವಾರವೇ ದೆಹಲಿ ತಲುಪಿದ್ದಾರೆ.
Related Articles
Advertisement
ಬಿಎಸ್‌ವೈ, ಈಶ್ವರಪ್ಪ ಫೈನಲ್: ಹಾಲಿ ಸಂಸದರ ಪೈಕಿ ಯಡಿಯೂರಪ್ಪ, ಹಾಲಿ ವಿಧಾನಪರಿಷತ್ ಸದಸ್ಯರ ಪೈಕಿ ಕೆ.ಎಸ್. ಈಶ್ವರಪ್ಪ ಅವರಿಗೆ ಸ್ಪರ್ಧೆಗೆ ಒಪ್ಪಿಗೆ ಸಿಕ್ಕಿದೆ.
ಸಂಸದ ಶ್ರೀರಾಮುಲು ಹಾಗೂ ಶೋಭಾ ಕರಂದ್ಲಾಜೆ ಅವರೂ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಕೇಳಿಬಂದಿತಾದರೂ ಅದನ್ನು ಕೇಂದ್ರದ ನಾಯಕರ ತೀರ್ಮಾನಕ್ಕೆ ಬಿಡಲಾಗಿದೆ. ನಾಯಕರ ಮಕ್ಕಳಿಗೆ ಟಿಕೆಟ್ ಕೊಡುವುದು ಎಂದಾದರೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಾಗೂ ವಿ.ಸೋಮಣ್ಣ ಪುತ್ರ ಡಾ.ಅರುಣ್‌ಸೋಮಣ್ಣ ಅವರಿಗೆ ಕ್ರಮವಾಗಿ ವರುಣಾ ಹಾಗೂ ಅರಸೀಕೆರೆಗೆ ಕ್ಷೇತ್ರದಿಂದ ಟಿಕೆಟ್ ಸಿಗಲಿದೆ. ಉಳಿದಂತೆ ವಿ.ಸೋಮಣ್ಣ ಸೇರಿ ಇತರೆ ವಿಧಾನಪರಿಷತ್ ಸದಸ್ಯ ಸ್ಪರ್ಧೆ ಬಗ್ಗೆಯೂ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಮತ್ತೂಬ್ಬ ಪ್ರಬಲ ಆಕಾಂಕ್ಷಿರುದ್ರೇಗೌಡರನ್ನು ಸಮಾಧಾನಪಡಿಸುವ ಜವಾಬ್ದಾರಿ ಬಿ.ಎಸ್. ಯಡಿಯೂರಪ್ಪ ಅವರೇ ತೆಗೆದುಕೊಂಡರು ಎಂದು ಹೇಳಲಾಗಿದೆ. ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹ ಮುಗಿದಿದ್ದು ಸಂಭಾವ್ಯರ ಪಟ್ಟಿಯೊಂದಿಗೆ ದೆಹಲಿಗೆ ತೆರಳುತ್ತಿದ್ದೇನೆ. ಎರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ 150 ಅಭ್ಯರ್ಥಿಗಳ ಹೆಸರು ಘೋಷಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಳ್ಳಲಿದ್ದೇನೆ.
– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು , ಜೆಡಿಎಸ್ ಇಕ್ಕಟ್ಟು ಇದೆ. ಆದರೆ, ಬಿಜೆಪಿಯಲ್ಲಿ ಒಗ್ಗಟ್ಟು ಇದೆ. ನಾವೆಲ್ಲರೂ ಒಟ್ಟಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮುಕ್ತವಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
– ಅನಂತಕುಮಾರ್, ಕೇಂದ್ರ ಸಚಿವ