Advertisement

Odisha Tragedy: ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

11:02 AM Jun 03, 2023 | Team Udayavani |

ಮುಂಬಯಿ: ಇಂದು ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು.ಆದರೆ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ದುರಂತದ ಹಿನ್ನೆಲೆಯಲ್ಲಿ ಈ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 280ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next