ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜು.14 ಹಾಗೂ 15 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜು. 14ರಂದು ಬೆಳಗ್ಗೆ 10.05ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಗ್ಗೆ 10.30ಕ್ಕೆ ಆಲನಹಳ್ಳಿಯ ಗಿರಿದರ್ಶಿನಿ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯಲಿರುವ ರಸ್ತೆ ಮತ್ತು ಒಳಚರಂಡಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11.15ಕ್ಕೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 12.30ಕ್ಕೆ ಸುತ್ತೂರು ಗ್ರಾಮದಲ್ಲಿ ಕೆರೆ ನೀರು ತುಂಬಿಸುವ ಏತ ನೀರಾವರಿ ಯೋಜನೆ ಹಾಗೂ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ 84-ಎ ರ ಪರಿಮಿತಿಯಲ್ಲಿ ಕಾಂಕ್ರೀಟ್ ಚರಂಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 1 ಗಂಟೆಗೆ ಕೊಂತಯ್ಯನಹುಂಡಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಕಟ್ಟಡದ ಉದ್ಘಾಟನೆ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ ತಗಡೂರು ಗ್ರಾಮದಲ್ಲಿ ಕೆರೆ ನೀರು ತುಂಬಿಸುವ ಯೋಜನೆ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್ಸಿ ಹಾಗೂ ಎಸ್ಟಿ ಕಾಲೋನಿಗಳಲ್ಲಿ ಸಿ.ಸಿ. ರಸ್ತೆಗಳು ಮತ್ತು ಒಳಚರಂಡಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 2 ಗಂಟೆಗೆ ಚಾಮರಾಜ ನಗರ ಜಿಲ್ಲೆಗೆ ತೆರಳುವರು. ಸಂಜೆ 5 ಗಂಟೆಗೆ ಮೈಸೂರು ನಗರದಲ್ಲಿ ಶ್ರೀ ಕಾಗಿನೆಲೆ ಗುರು ಪೀಠದ ವತಿಯಿಂದ ನಿರ್ಮಿಸಿರುವ ಕಾಲೇಜು ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡುವರು. ಜು. 15 ರಂದು ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಐಟಿಐ ಪ. ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ ಮಾಡುವರು.
ಬೆಳಗ್ಗೆ 11.30ಕ್ಕೆ ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಏಕಲವ್ಯ ನಗರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿರುವ ಫಲಾನುಭವಿಗಳಿಗೆ ವಸತಿ ಗೃಹಗಳ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಭೂತಾಳೆ ಪಿಚ್ ಮೈದಾನದಲ್ಲಿ ರಾಜೀವ್ ಗಾಂಧಿ ಆವಾಸ್ ಯೋಜನೆ, ವಾಜಪೇಯಿ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಆವಾಸ್ ಯೋಜನೆಯಡಿ ವಸತಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 12.30ಕ್ಕೆ ಎಪಿಎಂಸಿ ವತಿಯಿಂದ ಆಯೋಜಿಸಿರುವ ಭಾನುವಾರ ಸಂತೆ ಕಟ್ಟಡ, ಕ್ಲಿನಿಂಗ್, ಪ್ಯಾಕಿಂಗ್ ಘಟಕದ ಉದ್ಘಾಟನೆ ಮಾಡುವರು. ಮಧ್ಯಾಹ್ನ 1 ಗಂಟೆಗೆ ಇಲವಾಲದಲ್ಲಿ ಅಲ್ಪಸಂಖ್ಯಾತರ ಕಟ್ಟಡ ಉದ್ಘಾಟನೆ ಮಾಡುವರು. ಮಧ್ಯಾಹ್ನ 2.30ಕ್ಕೆ ಆನಂದೂರಿನಲ್ಲಿ ಏತ ನೀರಾವರಿ ಹಾಗೂ ಕೆರೆ ನೀರು ತುಂಬಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಸಾಗರಕಟ್ಟೆ ಸೇತುವೆ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಮೈಸೂರು ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿರುವ ಈಜು ಕೊಳದ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ರಾತ್ರಿ 8 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.