ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಮೇ13 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲೆಯ ಬರಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಸಚಿವ ಎಚ್.ಡಿ.ರೇವಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರು ಮೊದಲ ಬಾರಿಗೆ ಮುಖಾ ಮುಖೀಯಾಗಲಿ ದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎನ್.ವಿಜಯಪ್ರಕಾಶ್ ಅವರು ಮೊದಲ ಬಾರಿಗೆ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಡೀಸಿ, ಸಚಿವರ ವಾಕ್ಸಮರ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಯವರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವುದು ಸಹಜ. ಆದರೆ ಲೋಕಸಭಾ ಚುನಾವಣೆ ಪ್ರಕ್ರಿಯೆ ಆರಂಭ ವಾದ ನಂತರ ಚುನಾವಣಾ ಆಯೋಗದ ನಿರ್ದೇಶ ನದ ಮೇರೆಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಿಸಿತ್ತು. ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಾಗಿ ನೇಮಕವಾದ ನಂತರ ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಆವರಿಗೆ ಮುಜುಗರವಾಗುವಂತೆ ಹಲವು ಬಾರಿ ನಡೆದುಕೊಂಡಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಬಿಜೆಪಿ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಜಿಲ್ಲೆಯ ಬರಿಪರಿಹಾರ ಕಾರ್ಯಗಳ ನಿರ್ವ ಹಣೆಯಲ್ಲೂ ಜಿಲ್ಲಾಧಿಕಾರಿಯವರು ವಿಫಲವಾಗಿ ದ್ದಾರೆ ಎಂದು ಸಚಿವ ರೇವಣ್ಣ ಅವರೂ ಜಿಲ್ಲಾಧಿಕಾರಿ ಯವರವ ಮೇಲೆ ಹರಿಹಾಯ್ದು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಡ ಹೇರಿದ್ದರು. ಈ ನಡುವೆಯೇ ಮೇ13 ರಂದು ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಆವರ ಅಧ್ಯಕ್ಷತೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಪಾಲ್ಗೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿರುವುದು ಕುತೂಹಲ ಕೆರಳಿಸಿದೆ.
ಅಭಿವೃದ್ಧಿ ಕಾಮಗಾರಿ ಬಗ್ಗೆ ಚರ್ಚೆ: ಕಳೆದ 6 ತಿಂಗಳನಿಂದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾಮಗಾರಿಗಳ ವೇಗದಲ್ಲೂ ಕುಂಠಿತವಾಗಿದೆ. ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿಯಾದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸದಿದ್ದರಿಂದ ಅಧಿಕಾರಿಗಳೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯತ್ತ ಗಮನ ಹರಿಸಿಲ್ಲ. ಈ ಅಂಶಗಳ ಬಗ್ಗೆಯೂ ಶಾಸಕರು ಸಭೆಯಲ್ಲಿ ಪ್ರಸ್ತಾಪ ಮಾಡುವ ನಿರೀಕ್ಷೆಯಿದೆ.