Advertisement
ಶ್ರೀಗಳು ಲಿಂಗೈಕ್ಯರಾಗಿ ಜನವರಿ 21ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳ ಪ್ರಥಮ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಸಿದ್ಧಗಂಗಾ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮಧ್ಯೆ, ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊ ಳ್ಳಲು ರಾಜ್ಯದ ವಿವಿಧೆಡೆಯಿಂದ ಭಕ್ತರ ದಂಡೇ ಮಠದತ್ತ ಹರಿದು ಬರುತ್ತಿದೆ.
Related Articles
Advertisement
ಕೃತಿ ಬಿಡುಗಡೆ: ಸಮಾರಂಭದಲ್ಲಿ ಬೆಂಗಳೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಕಾರ್ಯಸೂಚಿ ಕೈಪಿಡಿ ವೆಬ್‌ಸೈಟ್ ಬಿಡುಗಡೆ ಮಾಡಲಾಗುತ್ತದೆ. ಸಿ.ಎನ್.ಸದಾಶಿವಯ್ಯ ವಿರಚಿತ ಶ್ರೀಗುರು ಕರುಣೆ ಮತ್ತು ನಿಷ್ಠೆ ಕೃತಿ, ಬ್ಯಾಲಕೆರೆ ಶಿವಣ್ಣ ವಿರಚಿತ ಯೋಗಾಂಗ ತ್ರಿವಿಧಿ ಮತ್ತು ಮುದ್ದೇನಹಳ್ಳಿ ನಂಜಯ್ಯ ವಿರಚಿತ ಶ್ರೀ ಶಿವಕುಮಾರ ಚರಿತೆ ಪುಸ್ತಕ ಬಿಡುಗಡೆಗೊಳ್ಳಲಿದೆ.
ಸನ್ಮಾನ: ಇದೇ ವೇಳೆ, ದೆಹಲಿಯ ಕೈಗಾರಿಕೋದ್ಯಮಿ ಮುಖೇಶ್ ಗರ್ಗ್ ಮತ್ತು ನವದೆಹಲಿ ಉಗ್ರ ನಿಗ್ರಹ ದಳದ ಅಧ್ಯಕ್ಷ ಮಣೀಂದರ್ ಜೀತ್ ಸಿಂಗ್ ಬಿಟ್ಟ ಅವರನ್ನು ಸನ್ಮಾನಿಸಲಾಗುತ್ತದೆ.
50 ಕೆ.ಜಿ.ಬೆಳ್ಳಿ ಪುತ್ಥಳಿ: ಶ್ರೀ ಶಿವಕುಮಾರ ಸ್ವಾಮೀಜಿಯವರ 50ಕೆ.ಜಿ.ತೂಕದ ಬೆಳ್ಳಿ ಪುತ್ಥಳಿಯನ್ನು ದೆಹಲಿ ಮೂಲದ ಕೈಗಾರಿಕೋದ್ಯಮಿ ಹಾಗೂ ಮಠದ ಅಭಿಮಾನಿಯಾದ ಮುಖೇಶ್ ಗರ್ಗ್ ಅವರು ಅರ್ಪಿಸ ಲಿದ್ದಾರೆ. 50 ಕೆ.ಜಿ. ತೂಕದ, 3 ಅಡಿ ಎತ್ತರ ದ ಶ್ರೀಗಳ ಬೆಳ್ಳಿ ಪುತ್ಥಳಿಯನ್ನು ಮುಂಬೈ ನಲ್ಲಿ ಮಾಡಿಸಿದ್ದು, ಶ್ರೀಗಳ ಗದ್ದುಗೆಯಲ್ಲಿ ಡಲು ವ್ಯವಸ್ಥೆ ಮಾಡಲಾಗಿದೆ. ಭಾನು ವಾರ ಬೆಳಗ್ಗೆ ವಿವಿಧ ಮಂಗಳವಾದ್ಯ, ಜಾನಪದ ನೃತ್ಯಗಳೊಂದಿಗೆ ಭವ್ಯ ಮೆರ ವಣಿಗೆಯಲ್ಲಿ ಇದನ್ನು ತರಲು ವ್ಯವಸ್ಥೆ ಮಾಡಲಾಗಿದೆ.
ಹಿರಿಯ ಶ್ರೀಗಳವರ ಪುಣ್ಯ ಸಮಾರಂಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಶ್ರೀಗಳು ಪ್ರಸಾದಕ್ಕೆ ಮೊದಲ ಆದ್ಯತೆ ನೀಡುತ್ತಿದ್ದರು. ಎಲ್ಲರಿಗೂ ಕುಳ್ಳಿರಿಸಿಯೇ ಪ್ರಸಾದ ನೀಡುವಂತೆ ಹೇಳುತ್ತಿದ್ದರು. ಅದಕ್ಕೆ ತಕ್ಕಂತೆ ಮಠದಿಂದ ಎಲ್ಲಾ ರೀತಿಯ ತಯಾರಿ ನಡೆದಿದೆ. ಭಕ್ತರಿಗೆ ಮಠದ ಏಳು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದ್ದು, ಒಂದು ಬಾರಿ ಹತ್ತು ಸಾವಿರ ಜನ ಕುಳಿತು ಊಟ ಮಾಡಬಹುದು.-ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷ. ಮಠದ ಹಿರಿಯ ಶ್ರೀಗಳ ಗದ್ದುಗೆಯಲ್ಲಿ ಅಂದು ಬೆಳಗ್ಗೆ 5 ಗಂಟೆಯಿಂದಲೇ ರುದ್ರಾಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ನೇತೃತ್ವದಲ್ಲಿ ವಿಧಿ-ವಿಧಾನ, ಪೂಜಾ-ಕೈಂಕರ್ಯಗಳು ನಡೆಯಲಿವೆ.
-ಡಾ.ಎಂ.ಎನ್.ಚನ್ನಬಸಪ್ಪ, ನಿರ್ದೇಶಕರು. ಎಸ್.ಐ.ಟಿ * ಚಿ.ನಿ ಪುರುಷೋತ್ತಮ್