Advertisement
ಅ. 13ರಿಂದ ಎಲ್ಲ ಪಕ್ಷಗಳ ಘಟಾನುಘಟಿ ನಾಯಕರು ಈ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಿದ್ದು, ಬುಧವಾರ ಕೊನೆಯ ಕ್ಷಣದಲ್ಲಿ ಜನಮನ ಸೆಳೆಯುವ ಕಸರತ್ತು ನಡೆಸಲಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ವ್ಯವಸ್ಥಿತ ಪ್ರಚಾರ ತಂತ್ರ ರೂಪಿಸಿ, ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಉಸ್ತುವಾರಿಗಳ ತಂಡವನ್ನೇ ರಚಿಸಿ ಅಬ್ಬರದ ಪ್ರಚಾರ ನಡೆಸಿವೆ.
Related Articles
Advertisement
ಕಾಂಗ್ರೆಸ್ ಕೂಡ ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ್ದು, ತಳ ಮಟ್ಟದ ಎಲ್ಲ ಮತದಾರರನ್ನು ತಲುಪುವ ಪ್ರಯತ್ನ ನಡೆಸಿದೆ. ವಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡೂ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿದ್ದಾರೆ.
ಇದನ್ನೂ ಓದಿ:ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್ ವಿಜ್ಞಾನಿ ಸಮೀರನ್ ಪಾಂಡಾ ಪ್ರತಿಪಾದನೆ
ಜೆಡಿಎಸ್ ನಾಯಕರು ಹಾನಗಲ್ ಕ್ಷೇತ್ರಕ್ಕಿಂತ ಸಿಂದಗಿಯಲ್ಲಿ ಹೆಚ್ಚಿನ ಶ್ರಮ ಹಾಕಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಿಂದಗಿಯಲ್ಲಿ ಒಂದು ವಾರ ಠಿಕಾಣಿ ಹೂಡಿದ್ದರು. ಅವರಿಗೆ ಬೆಂಬಲವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ನಿಖೀಲ್ ಕುಮಾರಸ್ವಾಮಿ ಸಿಂದಗಿ ಪ್ರಚಾರಕ್ಕೆ ಹೆಚ್ಚಿನ ಸಮಯ ನೀಡಿದ್ದಾರೆ.
ಎರಡೂ ಕ್ಷೇತ್ರಗಳ ಉಪಚುನಾವಣೆಗೆ 15 ದಿನಗಳ ಕಾಲ ನಡೆದ ಪ್ರಚಾರದ ಭರಾಟೆ, ಮಾತಿನ ಸಮರ, ಏಟಿಗೆ ಎದುರೇಟುಗಳಿಗೆ ಬುಧವಾರ ಸಂಜೆ ತೆರೆ ಬೀಳಲಿದೆ.