Advertisement

ಇಂದಿನಿಂದ ಶ್ರವಣಬೆಳಗೊಳದಲ್ಲಿ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ

06:50 AM Jun 24, 2018 | |

ಹಾಸನ/ಚನ್ನರಾಯಪಟ್ಟಣ: ಭಗವಾನ್‌ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರವಣಬೆಳಗೊಳದಲ್ಲಿ ಭಾನುವಾರದಿಂದ ಮೂರು ದಿನಗಳ ಕಾಲ ಪ್ರಥಮ ಬಾರಿಗೆ ಅಖೀಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. 

Advertisement

ಸಮ್ಮೇಳನಕ್ಕೆ ವೇದಿಕೆ ಸಿದ್ಧಗೊಂಡಿದೆ. ಪಟ್ಟಣದ ಪ್ರಮುಖ ರಸ್ತೆಗಳನ್ನು ಸಮ್ಮೇಳನಕ್ಕೆ ಸ್ವಾಗತ ಕೋರುವ ಬ್ಯಾನರ್‌ಗಳು, ತಳಿರು-ತೋರಣಗಳಿಂದ ಸಿಂಗರಿಸಲಾಗಿದೆ. ರಸ್ತೆಗಳ ಇಕ್ಕೆಲಗಳಲ್ಲಿ ಹಳದಿ ಕೆಂಪು ಬಣ್ಣಗಳಿರುವ ಬಾವುಟಗಳನ್ನು ನೆಡಲಾಗಿದೆ. ಶ್ರವಣಬೆಳಗೊಳದ ಚಾವುಂಡರಾಯ ಸಭಾಮಂಟಪದಲ್ಲಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜಿಯವರ ಸಾನ್ನಿಧ್ಯದಲ್ಲಿ ಹಾಗೂ ಡಾ.ಷ.ಶೆಟ್ಟರ್‌ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಭಾನುವಾರದಂದು ಬೆಳಗ್ಗೆ 9.30 ರಿಂದ 12.30ರ ವರೆಗೆ ವಿಶೇಷ ಆಹ್ವಾನಿತರಿಂದ ಬಾಹುಬಲಿಸ್ವಾಮಿಗೆ ಮಹಾಮಸ್ತಕಾಭಿಷೇಕ ನೇರವೇರಲಿದೆ. ನಂತರ ಸಂಜೆ 4 ರಿಂದ 6 ರವರೆಗೆ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬಾಹುಬಲಿ ವಿಶ್ವಶಾಂತಿ ಸಂದೇಶ ಕವಿಗೋಷ್ಠಿ ನಡೆಯಲಿದೆ. ಜೂ.25 ರಂದು ಬೆಳಗ್ಗೆ 9.15ಕ್ಕೆ ಚಂದ್ರಗಿರಿ ಬೆಟ್ಟ ಮಹಾದ್ವಾರದಿಂದ ಶ್ರವಣಬೆಳಗೊಳ ಮುಖ್ಯರಸ್ತೆ, ವಿಂಧ್ಯಗಿರಿ ಮಹಾದ್ವಾರ ಮಾರ್ಗವಾಗಿ ಚಾವುಂಡರಾಯ ಸಭಾಮಂಟಪದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. 10.30ಕ್ಕೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸಮ್ಮೇಳನ ಉದ್ಘಾಟಿಸಲಿದ್ದಾರೆ. 

ಡಾ.ಷ.ಶೆಟ್ಟರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮರಾಜ ದಂಡಾವತಿ, ಹಂಪ ನಾಗರಾಜಯ್ಯ, ಡಾ.ಸಿ.ಪಿ.ಕೃಷ್ಣಕುಮಾರ್‌, ಚಂದ್ರಶೇಖರ ಪಾಟೀಲ, ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌, ಶಾಸಕ ಸಿ.ಎನ್‌.ಬಾಲಕೃಷ್ಣ, ವಿಧಾನ ಪರಿಷತ್ತು ಸದಸ್ಯ ಎಂ.ಎ.ಗೋಪಾಲಸ್ವಾಮಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next