Advertisement

ಇಂದು ಜೆಡಿಎಸ್‌ ಮಹಾಧಿವೇಶನ

11:13 PM Feb 10, 2020 | Lakshmi GovindaRaj |

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಮಹಾಧಿವೇಶನ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾತ್ರಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಭೆ ನಡೆಯಿತು.

Advertisement

ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೂಪಿಸಬೇಕಾದ ಹೋರಾಟದ ರೂಪು-ರೇಷೆಗಳ ಬಗ್ಗೆ ಚರ್ಚಿಸಲಾಯಿತು. ಕಾರ್ಯಕಾರಿಣಿಯಲ್ಲಿ ಆರ್ಥಿಕ, ರಾಜಕೀಯ ನಿರ್ಣಯ ಮಂಡಿಸಿ ಮಂಗಳವಾರದ ಮಾಹಾಧಿವೇಶನದಲ್ಲಿ ಅಂಗೀಕಾರ ಪಡೆಯಲು ತೀರ್ಮಾನಿಸಲಾಯಿತು.

ಆರ್ಥಿಕ ನಿರ್ಣಯದಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದ್ದು ನರೇಂದ್ರ ಮೋದಿ ಸರ್ಕಾರದ ನೀತಿ ನಿಯಮಗಳೇ ಆರ್ಥಿಕತೆ ಬೀಳಲು ಕಾರಣ. ದೇಶದ ಜಿಡಿಪಿ 42 ವರ್ಷಗಳಲ್ಲಿ ಅತಿ ಕಡಿಮೆಗೆ ಕುಸಿದಿದೆ. ಇದರಿಂದಾಗಿ ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಮಧ್ಯಮ ಹಾಗೂ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ಆರ್ಥಿಕ ಚೇತರಿಕೆಗೆ ಕೇಂದ್ರ ಸರ್ಕಾರ ನೀತಿ ರೂಪಿಸಬೇಕು.

ಕಾರ್ಮಿಕ, ಕೈಗಾರಿಕಾ, ಕೃಷಿ ಕಲ್ಯಾಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಮಹಾಧಿವೇಶನದಲ್ಲಿ ಈ ನಿರ್ಣಯ ಗಳಿಗೆ ಅಂಗೀಕಾರ ಪಡೆಯಲಾಗುವುದು. ರಾಜ್ಯ ಘಟಕಗಳ ಅಧ್ಯಕ್ಷರು, ರಾಷ್ಟ್ರೀಯ ಸಮಿತಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next