Advertisement
ಪ್ರಧಾನಿ ನರೇಂದ್ರ ಮೋದಿ ಅವರು, ನಾಮಪತ್ರ ಸಲ್ಲಿಕೆ ಮಾಡಿರುವ ಬಿಜೆಪಿ ಅಭ್ಯರ್ಥಿಗಳ ಜತೆ ಮೋದಿ ಆ್ಯಪ್ ಮೂಲಕ ಗುರುವಾರ ಸಂವಾದ ನಡೆಸಲಿದ್ದಾರೆ. ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬರಲಿದ್ದು, ನಾಲ್ಕು ದಿನಗಳ ಕಾಲ ಎಂಟು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳ ಪ್ರವಾಸ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಗ್ಗೆ 9 ಗಂಟೆಗೆ ಪಕ್ಷದ ಅಭ್ಯರ್ಥಿಗಳು, ಪದಾಧಿಕಾರಿಗಳು, ಸಂಸದರು, ಶಾಸಕರೊಂದಿಗೆ ಮೋದಿ ಆ್ಯಪ್‌ನಲ್ಲಿ ಸಂವಾದ ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿಯವರು ಒಂದಿಷ್ಟು ಸಲಹೆ, ಸೂಚನೆ ನೀಡಲಿದ್ದು, ವಿಡಿಯೋ ಕಾನೆ#ರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಶಾ ನಾಲ್ಕು ದಿನ ಪ್ರವಾಸ
ಗುರುವಾರ ರಾತ್ರಿ ಬೆಂಗಳೂರಿಗೆ ಬರಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನಾಲ್ಕು ದಿನ ಎಂಟು ಜಿಲ್ಲೆಗಳಲ್ಲಿ ಕರುನಾಡ ಜಾಗೃತಿ ಯಾತ್ರೆ ಮೂಲಕ ಪ್ರಚಾರ ಮಾಡಲಿದ್ದಾರೆ. ಈ ವೇಳೆ 7 ಸಾರ್ವಜನಿಕ ಸಭೆ, 4 ರೋಡ್ ಶೋ, 7 ಕಡೆ ಕಾರ್ಯಕರ್ತರ ಸಭೆ ಹಾಗೂ 4 ದೇವಸ್ಥಾನ, ಮಠ ಮಂದಿರಗಳ ಭೇಟಿ ಸೇರಿದಂತೆ ಒಟ್ಟು 23 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಬಳ್ಳಾರಿ, ಕೂಡಲಸಂಗಮ, ಬಾಗಲಕೋಟೆ, ತಿಕೋಟ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಗೌರಿಬಿದನೂರು, ದೇವನಹಳ್ಳಿಗಳಲ್ಲಿ ಪ್ರಚಾರ, ಸಂಘಟನಾ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Related Articles
ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಕೂಡ, ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಉತ್ತರ ಕನ್ನಡದ ಅಂಕೋಲಾ, ಅಂಕೋಲಾ, ಕುಮಟಾ, ಭಟ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕೊಡಗಿನ ಗೋಣಿಕೊಪ್ಪಲು, ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಏ.27 ರಂದೇ ಧರ್ಮಸ್ಥಳಕ್ಕೂ ಭೇಟಿ ನೀಡಲಿದ್ದಾರೆ.
Advertisement