Advertisement

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

06:00 AM Mar 23, 2018 | Team Udayavani |

ಬೆಂಗಳೂರು : ಪ್ರಸ್ತಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡು ಏಪ್ರಿಲ್‌ 6ರ ವರೆಗೆ ನಡೆಯಲಿದೆ.

Advertisement

ಪ್ರಥಮ ಭಾಷೆಯ ವಿಷಯಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ ಮತ್ತು ಸಂಸ್ಕೃತ ಭಾಷೆಯ ಪರೀಕ್ಷೆ ಮೊದಲ ದಿನ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭವಾಗುವ ಪರೀಕ್ಷೆ 12.30ಕ್ಕೆ ಮುಗಿಯಲಿದೆ. ಮಧ್ಯಾಹ್ನದ ಪರೀಕ್ಷೆ 2ಕ್ಕೆ ಆರಂಭವಾಗಿ 5.15ಕ್ಕೆ ಮುಗಿಯಲಿದೆ.

ರಾಜ್ಯದ 2,817 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ 8,54,424 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 2,706 ವಿಕಲಚೇತನ ಅಭ್ಯರ್ಥಿಗಳು ಸೇರಿದ್ದಾರೆ. ಅಂಧರು, ಬುದ್ಧಿಮಾಂಧ್ಯರು, ದೈಹಿಕ ಮತ್ತು ಮಾನಸಿಕವಾಗಿ ವಿಕಲಚೇತನರಾಗಿರುವ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಕಲಚೇತನ ಅಭ್ಯರ್ಥಿಗಳ ಕೋರಿಕೆ ಮತ್ತು ವೈದ್ಯಕೀಯ ಪ್ರಮಾಣ ಪತ್ರದಂತೆ ವಿಶೇಷ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ರಾಜ್ಯದ 14,385 ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಲಿದ್ದು, 1,011 ಕ್ಲಸ್ಟರ್‌ ಹಾಗೂ 1807 ನಾನ್‌ ಕ್ಲಸ್ಟರ್‌ ಕೇಂದ್ರ ರಚಿಸಿದ್ದು, ಪರೀಕ್ಷಾ ಕೇಂದ್ರಗಳ ಪೈಕಿ 45 ಸೂಕ್ಷ್ಮ ಮತ್ತು 23 ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ 2817 ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಅಳವಡಿಸಲಾಗಿದೆ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next