Advertisement

ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

06:00 AM Sep 08, 2018 | Team Udayavani |

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಶನಿವಾರ ಮತ್ತು ಭಾನುವಾರ ನವದೆಹಲಿಯಲ್ಲಿ ನಡೆಯಲಿದೆ. 2 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ವಿತ್ತೀಯ ಕ್ಷೇತ್ರದಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ಚರ್ಚೆ ನಡೆಸಲಿದೆ. ಇದರ ಜತೆಗೆ ದಾಖಲೆ ಪ್ರಮಾಣದಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಚರ್ಚೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಶನಿವಾರ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಮಾರೋಪ ಭಾಷಣ ಮಾಡಲಿದ್ದಾರೆ. 

Advertisement

ಎರಡು ದಿನಗಳ ಕಾರ್ಯಕ್ರಮ ನವದೆಹಲಿಯ ಅಂಬೇಡ್ಕರ್‌ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ನಡೆಯಲಿದೆ. ವರ್ಷಾಂತ್ಯಕ್ಕೆ ನಡೆಯಲಿರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ದಲಿತ ಸಮುದಾಯದ ಮೆಚ್ಚುಗೆ ಗಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜ ಪೇಯಿ ಅವ ರ ನಿಧನದ ವೇಳೆ ನಿಗದಿಯಾಗಿದ್ದ ಕಾರ್ಯಕಾರಿಣಿ ಯನ್ನು ನಂತರ ಮುಂದೂಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next