Advertisement

ಇಂದು, ನಾಳೆ ಕಾಂಗ್ರೆಸ್‌ ಚಿಂತನ-ಮಂಥನ ಶಿಬಿರ

12:03 AM Jun 02, 2022 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯ ಕಾರ್ಯತಂತ್ರ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಹೋರಾಟ ಕುರಿತು ರೂಪುರೇಷೆ ಸಿದ್ಧಪಡಿಸಲು ಕಾಂಗ್ರೆಸ್‌ ಎರಡು ದಿನಗಳ ಕಾಲ ಚಿಂತನ -ಮಂಥನ ಶಿಬಿರ ನಡೆಸಲಿದೆ.

Advertisement

ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಜೂ. 2 ಮತ್ತು 3ರಂದು ಶಿಬಿರ ನಡೆಯಲಿದ್ದು, ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ.

ರಾಜಸ್ಥಾನದ ಉದಯಪುರದ ಚಿಂತನ ಶಿಬಿರದಲ್ಲಿ ಕೈಗೊಂಡ ನಿರ್ಣಯಗಳ ಜಾರಿ ಕುರಿತು ಸಮಾಲೋಚನೆ ನಡೆಸಲಾಗುವುದು.

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಪರಿಷತ್‌ ಹಾಗೂ ರಾಜ್ಯಸಭೆ ಚುನಾವಣೆ ಯಲ್ಲಿನ ಟಿಕೆಟ್‌ ಹಂಚಿಕೆ ಬಗ್ಗೆ ಅಸಮಾಧಾನ ಶಿಬಿರದಲ್ಲಿ ಸ್ಫೋಟವಾಗುವ ಸಾಧ್ಯತೆಯಿದ್ದು, ನಾಯಕರಲ್ಲಿ ಆಯ್ಕೆಯ ಮಾನದಂಡ ಪ್ರಶ್ನಿಸಲು ತಂಡ ಸಜ್ಜಾಗಿದೆ ಎನ್ನಲಾಗಿದೆ.

Advertisement

ಶಿಬಿರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿಚನೇತೃತ್ವದಲ್ಲಿ ಆರ್ಥಿಕ ವ್ಯವಹಾರಗಳ ಸಮಿತಿ, ರೆಹಮಾನ್‌ ಖಾನ್‌ ಅಧ್ಯಕ್ಷತೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಮಿತಿ, ಸಂಘಟನೆ ವಿಚಾರದಲ್ಲಿ ಬಿ.ಕೆ.ಹರಿಪ್ರಸಾದ್‌ ಸಮಿತಿ, ಕೃಷಿ ವಿಚಾರದಲ್ಲಿ ಎಂ.ಬಿ.ಪಾಟೀಲ್‌ ಸಮಿತಿ ರಚಿಸಲಾಗಿದೆ.

ಡಿಕೆಶಿ ಭೇಟಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಕಾರ್ಯಾಧ್ಯಕ್ಷ ಸಲೀಂ ಆಹಮದ್‌ ಜತೆಗೂಡಿ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಕೃಷ್ಣ ಬೈರೇಗೌಡ ನೇತೃತ್ವದ ಸಮುದಾಯ, ಮಹಿಳೆಯರು, ಸಿಕ್ಷಣ ಹಾಗೂ ಉದ್ಯೋಗ ಸಮಿತಿಯ ಪದಾಧಿಕಾರಿಗಳ ಜತೆ ಡಿ.ಕೆ. ಶಿವಕುಮಾರ್‌ ಸಭೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next