Advertisement

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

01:37 AM May 21, 2022 | Team Udayavani |

ಬೆಂಗಳೂರು: ಶನಿವಾರ ಮತ್ತು ರವಿವಾರ ನಡೆಯಲಿರುವ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕ ನೇಮಕಾತಿ ಪರೀಕ್ಷಾ ಕೇಂದ್ರಗಳ ಮೇಲೆ ಅಕ್ಷರಶಃ ಹದ್ದಿನಕಣ್ಣು ಇಡಲಾಗಿದೆ.

Advertisement

ಎಸ್‌ಐ ಮತ್ತು ಸಹಾ ಯಕ ಪ್ರಾಧ್ಯಾಪಕರ ನೇಮ ಕಾತಿಗೆ ಸಂಬಂಧಿಸಿದ ಪರೀಕ್ಷೆ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಮೆಟಲ್‌ ಡಿಟೆಕ್ಟರ್‌, ಪರೀಕ್ಷಾ ಕೇಂದ್ರಗಳ ಆವರಣ ಮತ್ತು ಕೊಠಡಿಗಳಲ್ಲಿ ಕಡ್ಡಾ ಯವಾಗಿ ಸಿಸಿ ಕೆಮರಾ ಅಳವಡಿಸುವ ಮೂಲಕ ಅಭ್ಯರ್ಥಿಗಳ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿಂದೆಂದಿಗಿಂತ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತವಾಗಿ ಪ್ರವೇಶಿಸುವ ಯಾವುದೇ ಅಧಿಕಾರಿ ಅಥವಾ ಸಾರ್ವಜನಿಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಕೂಡ ದಾಖಲಿಸಲು ನಿರ್ಧರಿಸಲಾಗಿದೆ.

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ನಡೆಯುವ ಪರೀಕ್ಷೆಗೆ ಒಟ್ಟು 435 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. 1.05 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next