Advertisement

ಇಂದು ವೇಣು, ಆಜಾದ್‌ ಆಗಮನ

01:39 AM May 28, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್‌ ಕಮಲದ ಭೀತಿ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಸಂಪುಟ ಪುನಾರಚನೆ ಪ್ರಯತ್ನ ನಡೆಸುತ್ತಿರುವುದರಿಂದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಗುಲಾಂನಬಿ ಆಜಾದ್‌ ಕೂಡ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

Advertisement

ಸದ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹಾಗೂ ಅತೃಪ್ತ ಶಾಸಕರನ್ನು ಸಮಾಧಾನ ಪಡಿಸಲು ಸಂಪುಟ ವಿಸ್ತರಣೆ ಮಾಡಬೇಕಾ ಅಥವಾ ಪುನಾರಚನೆ ಮಾಡಬೇಕ ಎನ್ನುವ ಕುರಿತು ಮೈತ್ರಿ ಪಕ್ಷಗಳ ನಾಯಕರಲ್ಲಿ ಗೊಂದಲ ಉಂಟಾಗಿದೆ. ಅಲ್ಲದೇ ಪುನಾರಚನೆಗೆ ಕೈ ಹಾಕಿದರೆ, ಮತ್ತೂಂದು ರೀತಿಯ ಸಂಕಷ್ಟ ಎದುರಾಗುವ ಸಾಧ್ಯತೆ ಇರುವುದರಿಂದ ಅದನ್ನು ಹೇಗೆ ನಿಭಾ ಯಿಸುವುದು ಎನ್ನುವ ಕುರಿತಂತೆ ರಾಜ್ಯ ಕಾಂಗ್ರೆಸ್‌ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್ ಚರ್ಚೆ ನಡೆಸುವ ಸಾಧ್ಯತೆಯಿದೆ.

ಈ ಕುರಿತು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಭೆ ನಡೆಸಿದರು. ಸಭೆ ನಂತರ ಮಾತನಾಡಿದ ದಿನೇಶ್‌ ಗುಂಡೂರಾವ್‌, ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವ ಕುರಿತು ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next