Advertisement

ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು

08:20 AM Feb 07, 2023 | Suhan S |

ಮೇಷ: ಗುರು ಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.

Advertisement

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರು ಹಿರಿಯರಿಂದ ಉತ್ತಮ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಮಿಥುನ:  ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ:  ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡು ಬಂದಾವು. ದಾಂಪತ್ಯ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರು ಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.

Advertisement

 ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಫರ್ದೆಗೆ ಆಸ್ಪದ ನೀಡದಿರಿ. ಬಂಧು ಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ:  ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗದಲ್ಲಿ ಗೌರವ.

 ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ.  ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಲ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರಲ್ಲಿ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ.

Advertisement

Udayavani is now on Telegram. Click here to join our channel and stay updated with the latest news.

Next