Advertisement

ಗುರುವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಸಂಪತ್ತು ವೃದ್ಧಿಯಾಗಲಿದೆ

07:16 AM Feb 23, 2023 | Suhan S |

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆ. ಗುರುಹಿರಿಯರಿಂದ ಸಂತೋಷ.

Advertisement

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.

ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ. ದಾಂಪತ್ಯ ಸುಖ ವೃದ್ಧಿ.

Advertisement

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next