Advertisement

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

06:55 PM Jul 07, 2024 | Suhan S |

ಮೇಷ: ಸಪ್ತಾಹ ಆರಂಭದಲ್ಲಿ ಹಿಂದಿನದೇ ಪರಿಸ್ಥಿತಿ. ಪರಿಶ್ರಮ ಅಧಿಕ, ಪ್ರತಿಫ‌ಲ ಸಾಮಾನ್ಯ. ಉದ್ಯಮದಲ್ಲಿ  ಮಾಮೂಲು ಸ್ಥಿತ್ಯಂತರಗಳು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ.

Advertisement

ವೃಷಭ: ಉದ್ಯೋಗದಲ್ಲಿ ಸ್ಥಿತಿ ಸುಧಾರಣೆ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ವೃದ್ಧಿ. ದೂರದಲ್ಲಿರುವ ನೆಂಟರ ಆಗಮನ. ಧಾರ್ಮಿಕ ಸಾಹಿತ್ಯ ಅಧ್ಯಯನ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ  ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ  ತಡೆಯಿಲ್ಲದ  ಪ್ರಗತಿ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಕುಟುಂಬದ ಹಳೆಯ ಹಿತೈಷಿಯ ಭೇಟಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಹೊಸಬರ ಆಗಮನ.  ಉದ್ಯಮದ ಉತ್ಪಾದನೆಗಳ ಬೇಡಿಕೆಯಲ್ಲಿ  ಪ್ರಗತಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ಅಲ್ಪಲಾಭ.

ಸಿಂಹ: ಸಾಹಸ ಪ್ರವೃತ್ತಿಗೆ ಗೆಲುವು. ಹೊಸ ಪಾಲುದಾರರಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ನಿವೇಶನ ಖರೀದಿ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಕುಟುಂಬದ ಮನೆಯಲ್ಲಿ ದೇವತಾ ಕಾರ್ಯ.

Advertisement

ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀ ಯರಿಂದ ಅಯಾಚಿತ ನೆರವು. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ಪೂರ್ಣ ನಿಶ್ಚಿಂತೆಯ ಪರಿಸ್ಥಿತಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್‌ ಧನಾಗಮ. ಗೃಹಾಲಂಕಾರಕ್ಕೆ ಧನ ವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಸಂಭಾವನೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದಲ್ಲಿ   ಹೊಸ  ವಸ್ತುಗಳ ಉತ್ಪಾದನೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ. ಗೃಹಿಣಿಯರ ಸ್ವಾವಲಂಬನೆ ಯೋಜನೆ  ಉನ್ನತ ಸ್ಥಿತಿಯಲ್ಲಿ.

ಧನು: ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ  ಪಾತ್ರರಾಗುವಿರಿ.  ಸಣ್ಣ ಪ್ರಮಾಣದ  ಉದ್ಯಮ ಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.

ಮಕರ: ಉದ್ಯೋಗಸ್ಥರಿಗೆ ಗೌರವ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ. ಭೂಮಿ ಖರೀದಿ-ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ಲಾಭದಾಯಕ ಯೋಜನೆಗಳಲ್ಲಿ ಹಣ ಹೂಡಿಕೆ. ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೂರದಲ್ಲಿರುವ ಬಂಧುಗಳ  ಆಗಮನ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.

ಮೀನ: ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ತಾಯಿಯ ಕಡೆಯ ಹಿರಿಯರ ಆಗಮನ. ಪ್ರತಿಭಾವಂತ ಬಡ ಮಕ್ಕಳಿಗೆ ಸಹಾಯ ಮಾಡುವ ಅವಕಾಶ. ವ್ಯವಹಾರ ಸಂಬಂಧ ಗಣ್ಯ ವ್ಯಕ್ತಿಯ ಭೇಟಿ.

Advertisement

Udayavani is now on Telegram. Click here to join our channel and stay updated with the latest news.

Next