Advertisement

ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ : ವಾರಾಂತ್ಯ ಲಾಕ್‌ಡೌನ್ ಭವಿಷ್ಯ ನಿರ್ಧಾರ

12:35 PM Jan 17, 2022 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಜಾರಿಯಲ್ಲಿರುವ ವೀಕ್‌ಎಂಡ್ ಲಾಕ್‌ಡೌನ್ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

Advertisement

ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ4  ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಹೊಸ ನಿಯಮ ಜಾರಿಗೆ ಬರುತ್ತದೆಯೋ, ಅಥವಾ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಮುಂದುವರಯುತ್ತದೆಯೋ, ಎಂಬುದು ಸ್ಪಷ್ಟವಾಗಲಿದೆ.

ಬೆಂಗಳೂರಿನಲ್ಲಿ ವಾರಾಂತ್ಯದ ಲಾಕ್‌ಡೌನ್ ಬೇಡ ಎಂದು ಹೊಟೇಲ್ ಸಂಘ ಹಾಗೂ ಬಾರ್ ಆಂಡ್ ರೆಸ್ಟೋರೆಂಟ್ ಮಾಲೀಕರ ಸಂಘ ಸೋಮವಾರ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದೆ. ಇದರಿಂದ ವ್ಯಾಪಾರ ನಷ್ಟವಾಗುತ್ತಿದ್ದು, ಸರಕಾರ ನಿಯಮ ಸಡಿಲಿಕೆ ಮಾಡಬೇಕೆಂದು ಮನವಿ ಸಲ್ಲಿಸಿವೆ. ಅದೇ ರೀತಿ ನಾನಾ ವಾಣಿಜ್ಯ ಸಂಸ್ಥೆಗಳಿಂದಲೂ ವಾರಾಂತ್ಯದ ಲಾಕ್‌ಡೌನ್ ವಿರುದ್ಧ ಅಪಸ್ವರ ಎದ್ದಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಈ ಸಭೆಯಲ್ಲಿ ಸಚಿವರ ಜತೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ತಜ್ಞರು ಭಾಗವಹಿಸಲಿದ್ದಾರೆ. ವಿಶೇಷವಾಗಿ ಮಕ್ಕಳ ಆರೋಗ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪೂರ್ಣ ಪ್ರಮಾಣದಲ್ಲಿ ಲಾಕ್‌ಡೌನ್ ಜಾರಿ ಮಾಡದೇ ಇರಲು ಸರಕಾರ ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next