Advertisement
ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಘಟಾನುಘಟಿ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಮಲ್ಲಿಕಾರ್ಜುನ ಖರ್ಗೆ, ಅನಂತ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್, ಮಧು ಬಂಗಾರಪ್ಪ, ಬಿ.ವೈ. ರಾಘವೇಂದ್ರ, ವಿ.ಎಸ್.ಉಗ್ರಪ್ಪ , ಈಶ್ವರ್ ಖಂಡ್ರೆ, ಪ್ರಹ್ಲಾದ್ ಜೋಶಿ, ವಿನಯ ಕುಲಕರ್ಣಿ, ಸುರೇಶ್ ಅಂಗಡಿ, ಪ್ರಕಾಶ್ ಹುಕ್ಕೇರಿ, ಭಗವಂತ್ ರಾವ್ ಖೂಬಾ, ಗದ್ದಿ ಗೌಡರ್, ಕರಡಿ ಸಂಗಣ್ಣ ಸೇರಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.