Advertisement
ಇದೇ ವೇಳೆ ತುಮಕೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 22 ಮತ್ತು ಬಿಬಿಎಂಪಿಯ ಸಗಾಯಪುರಂ ಮತ್ತು ಕಾವೇರಿಪುರಂ ವಾರ್ಡ್‌ಗಳು, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆಯ ವಾರ್ಡ್ ಸಂಖ್ಯೆ 26, ಬೆಳಗಾವಿ ಜಿಲ್ಲೆ ಸದಲಗಾ ಪುರಸಭೆಯ ವಾರ್ಡ್ ಸಂಖ್ಯೆ 19 ಮತ್ತು ಮುಗಳಖೋಡ ಪುರಸಭೆಯ ವಾರ್ಡ್ ಸಂಖ್ಯೆ 2ಕ್ಕೆ ಜರುಗಲಿರುವ ಉಪ ಚುನಾವಣೆಗೂ ಮತದಾನ ನಡೆಯಲಿದೆ.
Related Articles
Advertisement
ಎಲ್ಲೆಲ್ಲಿ ಚುನಾವಣೆ ?
8 ನಗರಸಭೆ: ಹಿರಿಯೂರು, ಹರಿಹರ, ಶಿಡ್ಲಘಟ್ಟ, ಸಾಗರ, ತಿಪಟೂರು, ನಂಜನಗೂಡು, ಬಸವಕಲ್ಯಾಣ, ಶಹಾಪುರ. 32 ಪುರಸಭೆ: ಆನೇಕಲ್, ದೇವನಹಳ್ಳಿ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಶಿಕಾರಿಪುರ, ಪಾವಗಡ, ಕುಣಿಗಲ್, ಕೆ.ಆರ್. ನಗರ, ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವ, ಭಟ್ಕಳ, ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ. 21 ಪಟ್ಟಣ ಪಂಚಾಯಿತಿ: ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಆಳ್ನಾವರ, ಹೊನ್ನಾವರ, ಸಿದ್ದಾಪುರ, ಔರಾದ್, ಕಮಲಾಪುರ.
ಎಡಗೈ ಮಧ್ಯ ಬೆರಳಿಗೆ ಶಾಯಿ
61ನಗರ ಸ್ಥಳೀಯ ಸಂಸ್ಥೆಗಳು
8 ನಗರ ಸಭೆ (247 ವಾರ್ಡ್)
32 ಪುರಸಭೆ (734 ವಾರ್ಡ್)
21 ಪಟ್ಟಣ ಪಂಚಾಯಿತಿ (315 ವಾರ್ಡ್)
ಮತದಾರರು:14.79 ಲಕ್ಷ
ಅಭ್ಯರ್ಥಿಗಳು:4,360ನಗರ ಸ್ಥಳೀಯ ಸಂಸ್ಥೆಗಳು ಆಯಾ ಪ್ರದೇಶದ ಸ್ಥಳೀಯ ಸರ್ಕಾರಗಳಿದ್ದಂತೆ. ನಾಗರಿಕ ಮೂಲಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ಈ ಸಂಸ್ಥೆಗಳ ಮೇಲಿರುತ್ತದೆ. ಪ್ರತಿಯೊಬ್ಬ ಮತದಾರ ಸಕ್ರಿಯವಾಗಿ ಭಾಗವಹಿಸಿ ತನ್ನ ಕರ್ತವ್ಯ ಮತ್ತು ಜವಾಬ್ದಾರಿ ನಿರ್ವಹಿಸಬೇಕು. ಅತಿ ಹೆಚ್ಚು ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು.
ಶಿವಮೊಗ್ಗ ಜಿಲ್ಲೆ ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರಿಗೆ ಎಡಗೈ ಮಧ್ಯ ಬೆರಳಿಗೆ ಶಾಯಿ ಹಚ್ಚಲಾಗುವುದು. ಆದರೆ, ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹತ್ತಿರದಲ್ಲೇ ಯಾವುದಾದರೂ ಚುನಾವಣೆ ನಡೆದು ಮಧ್ಯ ಬೆರಳಿಗೆ ಶಾಯಿ ಹಾಕಿದ್ದರೆ, ಬೇರೆ ಬೆರಳಿಗೆ ಶಾಯಿ ಹಾಕುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
61ನಗರ ಸ್ಥಳೀಯ ಸಂಸ್ಥೆಗಳು
8 ನಗರ ಸಭೆ (247 ವಾರ್ಡ್)
32 ಪುರಸಭೆ (734 ವಾರ್ಡ್)
21 ಪಟ್ಟಣ ಪಂಚಾಯಿತಿ (315 ವಾರ್ಡ್)
ಮತದಾರರು:14.79 ಲಕ್ಷ
ಅಭ್ಯರ್ಥಿಗಳು:4,360ನಗರ ಸ್ಥಳೀಯ ಸಂಸ್ಥೆಗಳು ಆಯಾ ಪ್ರದೇಶದ ಸ್ಥಳೀಯ ಸರ್ಕಾರಗಳಿದ್ದಂತೆ. ನಾಗರಿಕ ಮೂಲಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ಈ ಸಂಸ್ಥೆಗಳ ಮೇಲಿರುತ್ತದೆ. ಪ್ರತಿಯೊಬ್ಬ ಮತದಾರ ಸಕ್ರಿಯವಾಗಿ ಭಾಗವಹಿಸಿ ತನ್ನ ಕರ್ತವ್ಯ ಮತ್ತು ಜವಾಬ್ದಾರಿ ನಿರ್ವಹಿಸಬೇಕು. ಅತಿ ಹೆಚ್ಚು ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು.
● ಪಿ.ಎನ್. ಶ್ರೀನಿವಾಸಾಚಾರಿ, ರಾಜ್ಯ ಚುನಾಣಾ ಆಯುಕ್ತ