Advertisement

ಶೌಚಾಲಯ ನಿರ್ಮಿಸಿಕೊಂಡ ಗರ್ಭಿಣಿಯರಿಗೆ ಸೀಮಂತ

03:34 PM Jun 17, 2017 | |

ಕಲಬುರಗಿ: ಹೆಣ್ಣು ಮಕ್ಕಳ ಹಕ್ಕುಗಳು ಮೂಢನಂಬಿಕೆಯಿಂದ ಆಚರಣೆಗೆ ಬರುತ್ತಿಲ್ಲ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಅವರ ಹಕ್ಕುಗಳನ್ನು ದೊರಕಿಸಿಕೊಡುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌ ತಿಳಿಸಿದರು. 

Advertisement

ತಾಲೂಕು ಪಂಚಾಯಿತಿ ವ್ಯಾಪ್ತಿಯ ಡೊಂಗರಗಾಂವ ಗ್ರಾಮ ಪಂಚಾಯಿತಿಯಲ್ಲಿ ಕೂಸು ಕಾರ್ಯಕ್ರಮದಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ, ಶೌಚಾಲಯದ ವ್ಯವಸ್ಥೆ ಕಲ್ಪಿಸುವುದರ ಮೂಲಕ ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಬೇಕೆಂದರು.

ಜಿಲ್ಲಾ  ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಮಹಿಳೆ ಮತ್ತು ಕಿಶೋರಿಯರಿಗಾಗಿ ವಿನೂತನವಾಗಿ  “ಉಷಾ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಜಿಲ್ಲಾ ಧಿಕಾರಿಗಳೊಂದಿಗೆ ಚರ್ಚಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಂದಾಯ, ಗ್ರಾಮೀಣ ಅಭಿವೃದ್ಧಿ, ಆರೋಗ್ಯ ಇಲಾಖೆ  ಅಧಿಕಾರಿಗಳನ್ನು ಒಳಪಡಿಸಿಕೊಂಡು ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಎನ್‌. ಗೊಳೇದ  ಮಾತನಾಡಿ, ಡೊಂಗರಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳಲ್ಲಿ ಸುಮಾರು ಶೇ. 80 ರಷ್ಟು ಮನೆಗಳಿಗೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಮುಂದಿನ  ಆರು ತಿಂಗಳಲ್ಲಿ ಎಲ್ಲ ತಾಂಡಾಗಳನ್ನು ಬಯಲು ಬಹಿರ್ದೆಸೆ ಮುಕ್ತ ತಾಂಡಾಗಳೆಂದು ಘೋಷಿಸಬಹುದಾಗಿದೆ ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಸುವರ್ಣ ಹಣಮಂತರಾಯ  ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮುಖ್ಯ ಯೋಜನಧಿಕಾರಿ ಪ್ರವೀಣ ಪ್ರಿಯಾ ಡೆವಿಡ್‌,

Advertisement

-ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ವೀರಮ್ಮ ಎನ್‌. ಜಂಗಮಶೆಟ್ಟಿ,  ಡಾ| ಶಿವರಾಜ ಸಜ್ಜನಶೆಟ್ಟಿ, ಡಾ| ರಾಜಕುಮಾರ, ಶಾಂತಲಾ ಬಿಲ್ಲವ, ಚಂದ್ರಕಾಂತ ಜೇವಣಗಿ, ಡೊಂಗರಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿ ಆನಂದ  ದೊಡಮನಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next