ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ರವಿ ಕುಮಾರ್ ದಹಿಯಾ ಇತಿಹಾಸವನ್ನು ಸೃಷ್ಟಿಸಿದ್ದು, ಬುಧವಾರ (ಆಗಸ್ಟ್ 04) ಪುರುಷರ 57ಕೆಜಿ ವಿಭಾಗದಲ್ಲಿ ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
ಇದನ್ನೂ ಓದಿ:ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್
ಇಂದು ನಡೆದ ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದ ಸೆಮಿಫೈನಲ್ ನಲ್ಲಿ ಎದುರಾಳಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿ ಮತ್ತೊಂದು ಪದಕದ ಆಸೆಯನ್ನು ಜೀವಂತವಾಗಿರಿಸಿದ್ದಾರೆ.
2021ರ ಲಂಡನ್ ಒಲಿಂಪಿಕ್ಸ್ ನಲ್ಲಿ ಸುಶೀಲ್ ಕುಮಾರ್ ಬಳಿಕ ದಹಿಯಾ ಅವರು ಫೈನಲ್ ಪ್ರವೇಶಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಥಮ ಸುತ್ತಿನಲ್ಲಿ 0-1 ಮತ್ತು ದ್ವಿತೀಯ ಸುತ್ತಿನಲ್ಲಿ 2-9ರಲ್ಲಿ ಹಿನ್ನಡೆ ಕಂಡ ರವಿಕುಮಾರ್ ದಹಿಯಾ ಅಂತಿಮ ಸುತ್ತಿನಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಅವರನ್ನು ಮಣಿಸಿ ಅಂತಿಮ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಕನಿಷ್ಠ ಪಕ್ಷ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕದ ಭರವಸೆಯನ್ನಾದರೂ ಮೂಡಿಸಿದೆ.