Advertisement

ಎ. 20ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹ ಶುರು

11:58 PM Apr 18, 2020 | Sriram |

ಹೊಸದಿಲ್ಲಿ: ಲಾಕ್‌ಡೌನ್‌ ಅವಧಿಯಲ್ಲಿ ಕೆಲ ಸರಕು ಸಾಗಣೆ ಹಾಗೂ ಇತರ ಚಟುವಟಿಕೆಗಳಿಗೆ ಅವಕಾಶ ನೀಡಿ ಗೃಹ ಸಚಿವಾಲಯ ಆದೇಶಿಸಿದ ಬೆನ್ನಲ್ಲೇ ಎ. 20ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹ ಪುನರಾರಂಭಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿದ್ಧತೆ ನಡೆಸಿದೆ.

Advertisement

ಈ ಕುರಿತಂತೆ ಗೃಹ ಸಚಿವಾಲಯವು ಪ್ರಾಧಿಕಾರಕ್ಕೆ ಪತ್ರ ಬರೆದು, ಟೋಲ್‌ಗ‌ಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿತ್ತು. ಟೋಲ್‌ ಸಂಗ್ರಹದಿಂದ ಸರಕಾರದ ಬೊಕ್ಕಸಕ್ಕೆ ಹಣ ಬರುವ ಜತೆಗೆ ಹೆದ್ದಾರಿ ಪ್ರಾಧಿಕಾರಕ್ಕೂ ಆರ್ಥಿಕ ಬೆಂಬಲ ದೊರೆತಂತಾಗುತ್ತದೆ ಎಂದು ಗೃಹ ಸಚಿವಾಲಯ ಅಭಿಪ್ರಾಯಪಟ್ಟಿದೆ.

ಮಾ.25ರಂದು ಮೊದಲ ಬಾರಿ ಲಾಕ್‌ಡೌನ್‌ ಘೋಷಣೆಯಾದ ಸಂದರ್ಭದಲ್ಲಿ ದೇಶಾದ್ಯಂತ ಇರುವ ಎಲ್ಲ ಟೋಲ್‌ಗ‌ಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ರಸ್ತೆ ಮತ್ತು ಹೆದ್ದಾರಿ ಸಾರಿಗೆ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಹೈವೆಗಳಲ್ಲಿನ ಎಲ್ಲ ಟೋಲ್‌ಗ‌ಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next