Advertisement
ಅದಕ್ಕೆ, ಲಾಕ್‌ಡೌನ್ ಪರಿಣಾಮವಾಗಿ ಈಗಾಗಲೇ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮೇಲಾಗಿ ಅವರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸಾಗಾಣಿಕೆಯ ಅಡಚಣೆಗಳಿಂದಾಗಿಬೇಕಾ ಬಿಟ್ಟಿ ಬೆಲೆಗಳಿಗೆ ಉತ್ಪನ್ನ ಮಾರಾಟ ಮಾಡುವಂತಾಗಿದೆ. ಇಂತಹ ಸಮಯದಲ್ಲಿ ಅವರು ಮಾಡಿದ ಖರ್ಚು ಸಹ ರೈತರಿಗೆ ಸಿಗುತ್ತಿಲ್ಲ. ಹಾಗಾಗಿ, ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ದಿಷ್ಟ ಅವಧಿಗೆ ಟೋಲ್ ಶುಲ್ಕ ಪಾವತಿಯಿಂದ ರೈತರಿಗೆ ವಿನಾಯಿತಿ ನೀಡಿದರೆ ಅನುಕೂಲವಾಗಲಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಆದ್ದರಿಂದ, ರೈತರು ಕೃಷಿ, ತೋಟಗಾರಿಕೆ ಹಾಗೂ ಹೈನು ಉತ್ಪನ್ನಗಳ ಸಾಗಾಣಿಕೆಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವ ಕುರಿತ ತೀರ್ಮಾನದ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ನ್ಯಾಯಪೀಠ ವಿಚಾರಣೆ ಮುಂದೂಡಿತು.