ಕೋಟ: ಗುಂಡ್ಮಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಂದ ಸುಂಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಹೋರಾಟ ಆರಂಭಗೊಂಡಿದ್ದು, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸೋಮವಾರ ಬ್ರಹ್ಮಾವರ ತಹಶೀಲ್ದಾರ್, ವೃತ್ತ ನಿರೀಕ್ಷಕರು ಮತ್ತು ಟೋಲ್ ಅಧಿಕಾರಿಗಳ ಜಂಟಿ ಸಭೆ ಬ್ರಹ್ಮಾವರ ತಹಶೀಲ್ದಾರ್ ಕಚೇರಿಯಲ್ಲಿ ಜರಗಿತು.
ಶುಲ್ಕ ಹೇರಿಕೆ ಖಂಡಿಸಿ ಹೆದ್ದಾರಿ ಜಾಗೃತಿ ಸಮಿತಿಯ ಪ್ರಮುಖರು ಮತ್ತು ಸ್ಥಳೀಯರು ಸಾಸ್ತಾನ ಟೋಲ್‌ನಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಸಂದರ್ಭ ಬ್ರಹ್ಮಾವರದ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ.ಅಧಿಕಾರಿಗಳೊಂದಿಗೆ ಚರ್ಚಿಸಿಸಮಸ್ಯೆಗೆ ಪರಿಹಾರ ದೊರಕಿಸುವು ದಾಗಿ ಭರವಸೆ ನೀಡಿದ್ದರು. ಅದರಂತೆ ಸೋಮವಾರ ನಡೆಯಿತು.
ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶ್ಯಾಮಸುಂದರ ನಾೖರಿ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟು ಟೋಲ್ ವಿನಾಯಿತಿಯನ್ನು ಮುಂದುವರಿಸು ವಂತೆ ವಿನಂತಿಸಿ ದರು. ಇದಕ್ಕೆ ಟೋಲ್ ಗುತ್ತಿಗೆ ಪಡೆದುಕೊಂಡಿರುವ ಹೈವೇ ಕನ್‌ಸ್ಟ್ರಕ್ಷನ್-1 ಸಂಸ್ಥೆಯ ಅಧಿಕಾರಿ ಪ್ರೀತಂ ಗಂಗೂಲಿ ಉತ್ತರಿಸಿ, ದೇಶದಾದ್ಯಂತ ರಾ.ಹೆ. ದ್ದಾರಿ ನಿಯಮದಂತೆ ಸ್ಥಳೀಯರು ಟೋಲ್‌ಗಳಲ್ಲಿ ಪಾಸನ್ನು ಮಾಸಿಕ 310 ರೂ. ಪಾವತಿಸಿ ಸಂಚರಿಸಬಹುದು. ಇದು ಹೆದ್ದಾರಿ ಇಲಾಖೆಯ ನಿಯಮವಾಗಿದ್ದರಿಂದ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಈ ಬಗ್ಗೆ ಚರ್ಚೆ ನಡೆಯಿತು. ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಇಲ್ಲದ ಕಾರಣ ಮಂಗಳವಾರ ರಾಷ್ಟ್ರೀಯ ಹೆದ್ದಾರಿಯ ಉನ್ನತ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿರ್ಧಾರಕ್ಕೆ ಬರಲಾಯಿತು.
ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ಪಿ., ಬ್ರಹ್ಮಾವರ ಠಾಣಾಧಿಕಾರಿ ಮಧು, ಕೋಟ ಠಾಣೆಯ ತೇಜಸ್ವಿ, ಸುಧಾ ಪ್ರಭು, ಸಮಿತಿಯ ಪ್ರಮುಖರಾದ ಪ್ರತಾಪ್ ಶೆಟ್ಟಿ, ವಿಠಲ ಪೂಜಾರಿ, ಅಲ್ವಿನ್ ಅಂದ್ರಾದೆ, ನಾಗರಾಜ ಗಾಣಿಗ, ಅಚ್ಯುತ ಪೂಜಾರಿ, ದಿನೇಶ ಗಾಣಿಗ ಮೊದಲಾದವರಿದ್ದರು.