Advertisement

Breaking News : ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ ಸಮಂತಾ

04:10 PM Oct 02, 2021 | Team Udayavani |

ಹೈದರಾಬಾದ್ : ಟಾಲಿವುಡ್ ಸ್ಟಾರ್ ದಂಪತಿ ನಾಗಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆಯುತ್ತಿರುವುದು ಖಚಿತವಾಗಿದೆ. ಇಂದು ಇನ್‍ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಸಮಂತಾ, ಪತಿ ನಾಗಚೈತನ್ಯ ಅವರಿಂದ ದೂರ ಆಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

Advertisement

ನಾಗಚೈತನ್ಯ ಹಾಗೂ ಸಮಂತಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಈ ದಂಪತಿ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿತ್ತು. ಆದರೆ, ವಿಚ್ಛೇದನದ ವದಂತಿ ಬಗ್ಗೆ ಈ ಜೋಡಿ ಇದುವರೆಗೆ ತುಟಿ ಬಿಚ್ಚಿರಲಿಲ್ಲ. ಇದೀಗ ಅಂತೆ-ಕಂತೆಗಳಿಗೆ ತೆರೆ ಬಿದ್ದಿದ್ದು, ಪತಿ ನಾಗಚೈತನ್ಯ ಅವರಿಂದ ದೂರ ಆಗುತ್ತಿರುವುದಾಗಿ ಸಮಂತಾ ಹೇಳಿದ್ದಾರೆ.

ಇಂದು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಈ ವಿಚಾರವನ್ನು ಹಂಚಿಕೊಂಡಿರುವ ಸಮಂತಾ, ಸಾಕಷ್ಟು ಸಮಾಲೋಚನೆ ನಂತರ ನಾನು ಹಾಗೂ ಚೈ ಸತಿ-ಪತಿಯ ಸಂಬಂಧವನ್ನು ಕಡಿದುಕೊಳ್ಳುತ್ತಿದ್ದೇವೆ ಎಂದಿದ್ದಾರೆ.

ಅಭಿಮಾನಿಗಳು, ಆಪ್ತರು ಹಾಗೂ ಮಾಧ್ಯಮದವರಲ್ಲಿ ಮನವಿ ಮಾಡಿರುವ ಸಮಂತಾ, ಇಂತಹ ಕಷ್ಟದ ಸಂದರ್ಭದಲ್ಲಿ ನಮ್ಮ ಜೊತೆ ಸಹಕರಿಸಿ, ನಮ್ಮ ಖಾಸಗಿತನ ಗೌರವಿಸಿ. ನಾವು ಬೇರೆಯಾಗಲೇಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next